ನವದೆಹಲಿ,ಮೇ,13,2025 (www.justkannada.in): ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟಿಸಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
ಈ ಬಾರಿ ಶೇ. 88.39 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬಾರಿ ಶೇ. 91.64 ರಷ್ಟು ಹುಡುಗಿಯರು ಪಾಸ್ ಆಗಿದ್ದರೇ, ಬಾಲಕರ ಉತ್ತೀರ್ಣ ಪ್ರಮಾಣ ಶೇ. 85.70 ರಷ್ಟಿದೆ. ಬೆಂಗಳೂರಿಗೆ ನಾಲ್ಕನೇ ಸ್ಥಾನ ಬಂದಿದೆ.
ಮಂಡಳಿಯ ಅಧಿಕೃತ ವೆಬ್‌ಸೈಟ್ ಹೊರತುಪಡಿಸಿ, ವಿದ್ಯಾರ್ಥಿಗಳು ಡಿಜಿಲಾಕರ್‌ನಲ್ಲಿಯೂ ಫಲಿತಾಂಶವನ್ನು ಪರಿಶೀಲಿಸಬಹುದು. ಈ ವರ್ಷ, 17,04,367 ವಿದ್ಯಾರ್ಥಿಗಳು ಸಿಬಿಎಸ್‌ಇ 12 ನೇ ತರಗತಿಯ ಬೋರ್ಡ್ ಪರೀಕ್ಷೆಗಳಿಗೆ ಹಾಜರಾಗಿದ್ದರು. ಈ ಪೈಕಿ 16,92,794 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಈ ಪೈಕಿ ಉತ್ತೀರ್ಣರಾದ ವಿದ್ಯಾರ್ಥಿಗಳ ಸಂಖ್ಯೆ 14 ಲಕ್ಷ 96 ಸಾವಿರ 307. ಕಳೆದ ಬಾರಿ ಸಿಬಿಎಸ್‌ಇ 12ನೇ ತರಗತಿಯಲ್ಲಿ ಶೇ. 87.98 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು.
ಪರೀಕ್ಷೆ ಫಲಿತಾಂಶ ವೀಕ್ಷಿಸಲು CBSE ಯ ಅಧಿಕೃತ ವೆಬ್‌ಸೈಟ್ cbseresults.nic.in ಗೆ ಭೇಟಿ ನೀಡಬಹುದು.
Key words: CBSE, 12th Class , results, declared