ಡಾ.ಬಿ.ಆರ್ ಅಂಬೇಡ್ಕರ್ ನಾಮಫಲಕಕ್ಕೆ ಅಪಮಾನ: ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ

ಮೈಸೂರು,ಮೇ,15,2025 (www.justkannada.in):  ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ನಾಮಫಲಕಕ್ಕೆ ಮಣ್ಣು ಬಳಿದು ಅಪಮಾನ ಮಾಡಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹಲ್ಲರೆ ಗ್ರಾಮದಲ್ಲಿ ನಡೆದಿದ್ದು, ಕಿಡಿಗೇಡಿಗಳನ್ನು ಬಂಧಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.  ಕಳೆದ ಕೆಲವು ತಿಂಗಳ ಹಿಂದಷ್ಟೇ ನಾಮಫಲಕ ಅಳವಡಿಸುವ ವಿಚಾರದಲ್ಲಿ ಎರಡು ಕೋಮುಗಳ ನಡುವೆ ಘರ್ಷಣೆ ನಡೆದಿತ್ತು. ಈ ವೇಳೆ ಅಪಾರ ಪ್ರಮಾಣದ ಹಾನಿ ಉಂಟಾಗಿತ್ತು. ಇದೀಗ ರಾತ್ರಿಯ ಸಮಯದಲ್ಲಿ ಕಿಡಿಗೇಡಿಗಳು ಅಂಬೇಡ್ಕರ್ ಅವರ ನಾಮಫಲಕಕ್ಕೆ ಮಣ್ಣು ಬಳಿದು ಅಂಬೇಡ್ಕರ್ ಭಾವಚಿತ್ರವಿರುವ ಸ್ಟಿಕರ್ ಹರಿದು ಅಪಮಾನ ಮಾಡಿದ್ದಾರೆ

ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಸ್ಥಳದಲ್ಲಿ ಬಿಡು ಬಿಟ್ಟಿದ್ದಾರೆ. ಕಿಡಿಗೇಡಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Key words:  Dr. B.R. Ambedkar, insult,  nameplate, Mysore