ಬೆಂಗಳೂರಿನಲ್ಲಿ ವರುಣನ ಅವಾಂತರ: ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಮೇ,19,2025 (www.justkannada.in):  ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಯಿಂದ ಜನ ಜೀವನ ಅಸ್ತವ್ಯಸ್ತವಾಗಿದ್ದು ಹಲವು ಭಾಗಗಳಲ್ಲಿ ಮನೆಗೆ ಮಳೆ ನೀರು ನುಗ್ಗಿ ಅವಾಂತರ ಸೃಷ್ಠಿಸಿದೆ. ಈ ಹಿನ್ನೆಲೆಯಲ್ಲಿ ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಕಳವಳ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಡಿಸಿಎಂ ಡಿಕೆ ಶಿವಕುಮಾರ್,  ಬೆಂಗಳೂರು ನಗರದ ಹಲವೆಡೆ ಭಾರೀ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದ್ದು ಹಾನಿಯಿಂದ ತೀವ್ರ ಕಳವಳಗೊಂಡಿದ್ದೇನೆ, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ನಾನು ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ತಿಳಿಸಿದ್ದಾರೆ.

ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು,  ಯಾವಾಗಲೂ ಹಾಗೆ, ನಾನು ಬೆಂಗಳೂರಿಗೆ ಬದ್ಧನಾಗಿರುತ್ತೇನೆ – ಸವಾಲುಗಳನ್ನು ಎದುರಿಸಲು ಮತ್ತು ಪರಿಹಾರವನ್ನು ಖಚಿತಪಡಿಸಿಕೊಳ್ಳಲು ದಿನದ 24 ಗಂಟೆಗಳೂ ಕೆಲಸ ಮಾಡುತ್ತಿದ್ದೇನೆ. ನಾನು ಬಿಬಿಎಂಪಿ ವಾರ್ ರೂಮ್ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ವೈಯಕ್ತಿಕವಾಗಿ ಭೇಟಿ ನೀಡಿ ಮಾಹಿತಿ ಪಡೆಯುತ್ತೇನೆ ಎಂದು ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

Key words: Rain, Bengaluru, DCM , DK Shivakumar