ಬೆಂಗಳೂರು,ಮೇ,19,2025 (www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಮಹಾಮಳೆ ಅವಾಂತರದಿಂದಾಗಿ ಮೊದಲ ಬಲಿಯಾಗಿದ್ದು, ಗೋಡೆ ಕುಸಿದು ಮಹಿಳಾ ಉದ್ಯೋಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ಈ ದುರಂತ ಸಂಭವಿಸಿದೆ. ಶಶಿಕಲಾ (35) ಗೋಡೆ ಕುಸಿತು ಮೃತಪಟ್ಟ ಮಹಿಳೆ.. ಭಾರಿ ಮಳೆಯಿಂದಾಗಿ ಗೋಡೆ ಕುಸಿದು ಬಿದ್ದ ಪರಿಣಾಮ ಅವಶೇಷಗಳಡಿ ಸಿಲುಕಿ ಮಹಿಳೆ ಸಾವನ್ನಪ್ಪಿದ್ದಾರೆ.
ಮೃತ ಶಶಿಕಲಾ ಖಾಸಗಿ ಕಂಪನಿಯ ಉದ್ಯೋಗಿಯಾಗಿದ್ದರು. ಇಂದು ಬೆಳಗ್ಗೆ ವೈಟ್ ಫೀಲ್ಡ್ ನ ಖಾಸಗಿ ಕಂಪನಿಯಲ್ಲಿ ಹೌಸ್ ಕೀಪಿಂಗ್ ಕೆಲಸಕ್ಕೆ ಹೋದಾಗ ದುರ್ಘಟನೆ ನಡೆದಿದೆ. ಕೆಲಸದ ಸ್ಥಳದಲ್ಲಿದ್ದ ಕಾಂಪೌಂಡ್ ಗೋಡೆ ಕುಸಿದು ಶಶಿಕಲಾ ಸಾವನ್ನಪ್ಪಿದ್ದಾರೆ.
Key words: employee, dies, wall, collapses , heavy rain