ಮಳೆ ಸಂಕಷ್ಟ: ಸಿಎಂ ಸಿದ್ದರಾಮಯ್ಯ ಸಿಟಿ ರೌಂಡ್ಸ್ ರದ್ದು

ಬೆಂಗಳೂರು,ಮೇ,19,2025 (www.justkannada.in):  ಬೆಂಗಳೂರಿನಲ್ಲಿ ನಿನ್ನೆ ಸುರಿದ ಭಾರಿ ಮಳೆಯಿಂದಾಗಿ ಸಾಲು ಸಾಲು ಅವಾಂತರ ಸೃಷ್ಟಿಯಾಗಿದ್ದು ಈ ಮಧ್ಯೆ ಇಂದು ಸಿಎಂ ಸಿದ್ದರಾಮಯ್ಯ ಕೈಗೊಳ್ಳಬೇಕಾಗಿದ್ದ ನಗರ ಪ್ರದಕ್ಷಿಣೆ ರದ್ದಾಗಿದೆ.

ಬೆಂಗಳೂರಿನಲ್ಲಿ ಮಳೆರಾಯ ಬಿಟ್ಟು ಬಿಡದೇ ಕಾಡುತ್ತಿದ್ದು, ಇಂದು ಸಹ ಹಲವು ಪ್ರದೇಶಗಳಲ್ಲಿ ವರುಣನ ಆರ್ಭಟ ಜೋರಾಗಿದೆ. ಈ ಮಧ್ಯೆ ಇಂದು ನಗರದ ಮಳೆಹಾನಿ ಪ್ರದೇಶಗಳಲ್ಲಿ ಪರಿಶೀಲನೆ ನಡೆಸುವುದಾಗಿ ಸಿಎಂ ಸಿದ್ದರಾಮಯ್ಯ , ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದರು.

ಆದರೆ ಇದೀಗ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರ ಸಿಟಿ ರೌಂಡ್ಸ್ ಕಾರ್ಯಕ್ರಮ ರದ್ದಾಗಿದ್ದು ಸಿಎಂ ಸಿದ್ದರಾಮಯ್ಯ ವಾರ್ ರೂಮ್ ಗೆ ತೆರಳಿದ್ದು ಅಲ್ಲಿ ಅಧಿಕಾರಿಗಳಿಂದ ಮಳೆ ಹಾನಿ ಕುರಿತು ಮಾಹಿತಿ ಸಂಗ್ರಹಿಸಲಿದ್ದಾರೆ.

Key words: Rain, CM Siddaramaiah,Bangalore, city rounds, cancel