ವಾರ್ ರೂಮ್ ಗೆ ಭೇಟಿ ನೀಡಿ ಮಳೆ ಹಾನಿ ವೀಕ್ಷಣೆ: ಕೂಡಲೇ ಕ್ರಮ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು, ಮೇ,19,2025 (www.justkannada.in):  ಬೆಂಗಳೂರು ನಗರದಾದ್ಯಂತ ಭಾರಿ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿದ್ದು ಈ ನಡುವೆ ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ವಾರ್ ರೂಮ್ ಗೆ ಭೇಟಿ ನೀಡಿ ಮಳೆ ಹಾನಿ ವೀಕ್ಷಣೆ ಮಾಡಿದರು.

ಬಿಬಿಎಂಪಿ ಕಚೇರಿಯಲ್ಲಿರುವ ಕಂಟ್ರೋಲ್ ರೂಮ್ ಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್, ಮಳೆ ಅನಾಹುತಗಳ ಬಗ್ಗೆ ಮಾಹಿತಿ ಕಲೆ ಹಾಕಿದರು. ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಅವರು ಮಳೆ ಹಾನಿ ಪ್ರದೇಶಗಳ ಪರಿಶೀಲನೆ ನಡೆಸಿದ್ದು, ಸಿಎಂ ಸಿದ್ದರಾಮಯ್ಯಗೆ ತುಷಾರ್ ಗಿರಿನಾಥ್ ವಿವರಣೆ ನೀಡಿದರು.

ಇನ್ನು ಇದೇ ವೇಳೆ ಮಳೆಯಿಂದಾಗುವ ಹಾನಿಯ ಬಗ್ಗೆ ಕೂಡಲೇ ಪರಿಹಾರ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.

Key words: CM Siddaramaiah, War Room, action, rain, damage