ಬೆಂಗಳೂರು,ಮೇ,20,2025 (www.justkannada.in): ಇತ್ತ ಭಾರಿ ಮಳೆಯಿಂದಾಗಿ ಬೆಂಗಳೂರಿನ ಜನತೆ ಸಂಕಷ್ಟಕ್ಕೆ ಸಿಲುಕಿದ್ದು ಇಂತಹ ಪರಿಸ್ಥಿತಿಯಲ್ಲಿ ಅತ್ತ ಕಾಂಗ್ರೆಸ್ ಸರ್ಕಾರ ತನ್ನ 2ವರ್ಷದ ಸಾಧನಾ ಸಮಾವೇಶ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ದ ಬಿಜೆಪಿ ನಾಯಕರು ಆಕ್ರೋಶ ಹೊರ ಹಾಕಿದ್ದಾರೆ.
ಇಂದು ಮಳೆಹಾನಿ ಪ್ರದೇಶಗಳಿಗೆ ಬಿಜೆಪಿ ನಾಯಕರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಿಲ್ಕ್ ಬೋರ್ಡ್ ಸುತ್ತಮುತ್ತ ಸೇರಿ ಹಲವು ಕಡೆಗಳಲ್ಲಿ ಬಿಜೆಪಿ ನಾಯಕರಾದ ಬಿವೈ ವಿಜಯೇಂದ್ರ ವಿಪಕ್ಷ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಎನ್ ರವಿ ಕುಮಾರ್ ಶಾಸಕ ಸತೀಶ್ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅಲ್ಲದೆ ಇದೇನಾ ಬ್ರ್ಯಾಂಡ್ ಬೆಂಗಳುರು ಎಂದು ಪೋಸ್ಟರ್ ಹಿಡಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಮಾತನಾಡಿದ ಆರ್.ಅಶೋಕ್, ಕಾಂಗ್ರೆಸ್ ನಾಯಕರು ಮೊದಲು ಸಮಾವೇಶ ರದ್ದು ಮಾಡಲಿ ಸಮಾವೇಶ ರದ್ದು ಮಾಡಿ ಮಳೆಹಾನಿ ಪ್ರದೇಶಕ್ಕೆ ಭೇಟಿ ನೀಡಲಿ ಎಂದು ಕಿಡಿಕಾರಿದರು.
Key words: BJP leaders, visit, rain-damaged areas