ಬೆಂಗಳೂರು,ಮೇ,20,2025 (www.justkannada.in): ಕಾಂಗ್ರೆಸ್ ಸರ್ಕಾರ ಎರಡು ವರ್ಷ ಪೂರೈಸಿದ್ದಕ್ಕೆ ವಿಜಯನಗರದ ಹೊಸಪೇಟೆಯಲ್ಲಿ ಇಂದು ಹಮ್ಮಿಕೊಂಡಿರುವ ಸಾಧನಾ ಸಮಾವೇಶದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಟೀಕಿಸಿದ್ದಾರೆ.
ಇಂದು ಬೆಂಗಳೂರಿನ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದ ಬಿವೈ ವಿಜಯೇಂದ್ರ, ಬೆಂಗಳೂರು ಇಂದು ಮಳೆಯಿಂದಾಗಿ ಜಲಾವೃತವಾಗಿದೆ ನಾಲ್ಕೈದು ಜನ ಸತ್ತಿದ್ದಾರೆ. ಆದರೆ ಅಲ್ಲಿ ಹೊಸಪೇಟೆಯಲ್ಲಿ ಕಾಂಗ್ರೆಸ್ ಮೋಜು ಮಸ್ತಿ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.
ಗ್ರೇಟರ್ ಬೆಂಗಳೂರು ಅಂದ್ರೆ ಆಗಲ್ಲ. ಮೊದಲು ಬೆಂಗಳೂರು ಸಮಸ್ಯೆ ಸರಿಮಾಡಿ. ಕಾಮಗಾರಿಗಳನ್ನ ಅರ್ಧಕ್ಕೆ ನಿಲ್ಲಿಸಲಾಗಿದೆ. ರಾಜ್ಯ ಸರ್ಕಾರಕ್ಕೆ ಬೆಂಗಳೂರಿನ ಬಗ್ಗೆ ಕಾಳಜಿ ಇಲ್ಲ . ಹೊಸಪೇಟೆಯಲ್ಲಿ ಮಜಾ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
Key words: Congress, convention, Hospet, BY Vijayendra