ಬೆಂಗಳೂರು ಗ್ರಾಮಾಂತರ ಮೇ, 20,2025 (www.justkannada.in): ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ-2025 ಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್ ದಾಸ್ ಅವರ ಈ ವಿಚಾರಣಾ ಆಯೋಗ ರಚಿಸಿ ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಬಗ್ಗೆ ದತ್ತಾಂಶಗಳನ್ನು ಸಂಗ್ರಹಿಸಲು ಮನೆ ಮನೆ ಸಮೀಕ್ಷೆ ಕಾರ್ಯ ನಡೆಸಲಾಗುತ್ತಿದೆ.
ಈ ಮಧ್ಯೆ ಮನೆ ಮನೆ ಭೇಟಿ ಸಂದರ್ಭದಲ್ಲಿ ತಮ್ಮ ಮಾಹಿತಿಯನ್ನು ನೀಡದವರು ನೇರವಾಗಿ ಆನ್ ಲೈನ್ ಮೂಲಕ ಸಮೀಕ್ಷಾ ವಿವರಗಳನ್ನು ಸ್ವಯಂ ಘೋಷಣೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ಸ್ವಯಂ ಘೋಷಣೆ ಮಾಡಿಕೊಳ್ಳಲು ಮೇ 19 ರಿಂದ 28 ರವರೆಗೆ ಅವಕಾಶ ಕಲ್ಪಿಸಲಾಗಿದ್ದು https://schedulecastesurvey.karnataka.gov.in/selfdeclaration ವೆಬ್ಸೈಟ್ ಮೂಲಕ ಸ್ವಯಂ ಘೋಷಣೆ ಮಾಡಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Key words: internal reservation, survey, self-declaration, online