ಬೆಳಗ್ಗೆಯಿಂದ ಸಾಧನಾ ಸಮಾವೇಶ ಮಾಡಿದ್ದು ಸಾಕು: ಮಳೆ ಅನಾಹುತದ ಕಡೆ ಗಮನ ಹರಿಸಿ- ಕೇಂದ್ರ ಸಚಿವ ಹೆಚ್.ಡಿಕೆ

ಬೆಂಗಳೂರು,ಮೇ,20,2025 (www.justkannada.in): ರಾಜ್ಯದಲ್ಲಿ ಭಾರಿ ಮಳೆಯಿಂದ ಅವಾಂತರ ಸೃಷ್ಠಿಯಾಗಿರುವ ವೇಳೆಯೇ ಕಾಂಗ್ರೆಸ್ ಸರ್ಕಾರ ತನ್ನ ಎರಡು ವರ್ಷದ ಸಾಧನಾ ಸಮಾವೇಶ ನಡೆಸಿದಕ್ಕೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ,  ಬೆಳಗ್ಗೆಯಿಂದ ಸಾಧನಾ ಸಮಾವೇಶ ಮಾಡಿದ್ದು ಸಾಕು. ನಿಮ್ಮ ಗ್ಯಾರಂಟಿ ನಾಟಕವೂ ಸಾಕು. ಮೊದಲು ಬೆಂಗಳೂರು ಸೇರಿ ರಾಜ್ಯದ ಉದ್ದಗಲಕ್ಕೂ ಆಗಿರುವ ಮಳೆ ಅನಾಹುತದ ಕಡೆ ಗಮನ ಹರಿಸಿ ಎಂದು ಕುಟುಕಿದ್ದಾರೆ.

ಇಡೀ ರಾಷ್ಟ್ರಕ್ಕೆ ಮಾದರಿ ನಗರ ಆಗಿದ್ದ ಬೆಂಗಳೂರು ದುಸ್ಥಿತಿಯನ್ನು ಸರಿಪಡಿಸಿ. ಕಷ್ಟದಲ್ಲಿರುವ ಜನರಿಗೆ ಸ್ಪಂದಿಸಿ. ರಾಜ್ಯಾದ್ಯಂತ ಮಳೆಹಾನಿ ಪ್ರದೇಶಗಳಿಗೆ ಸಚಿವರನ್ನು ನಿಯೋಜನೆ ಮಾಡಿ ತಕ್ಷಣವೇ ಪರಿಹಾರ ಕಾರ್ಯಕ್ರಮಗಳನ್ನು ಕೈಗೊಳ್ಳಿ ಎಂದು ಟ್ವಿಟ್ಟರ್ ನಲ್ಲಿ ಆಗ್ರಹಿಸಿದ್ದಾರೆ.

Key words: Sadhana convention, congress, rain, Union Minister, HDK