Wednesday, October 7, 2026

BDA Apartments

Just Kannada BDA JK_Adv BDA Adv
Home Front Page ಅಧಿವೇಶನದ ಚಿತ್ರೀಕರಣಕ್ಕೆ ಮಾಧ್ಯಮಗಳಿಗೆ ನಿರ್ಬಂಧ ಸರಿಯಲ್ಲ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆಕ್ಷೇಪ…

ಅಧಿವೇಶನದ ಚಿತ್ರೀಕರಣಕ್ಕೆ ಮಾಧ್ಯಮಗಳಿಗೆ ನಿರ್ಬಂಧ ಸರಿಯಲ್ಲ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆಕ್ಷೇಪ…

ಬೆಂಗಳೂರು,ಅ,9,2019(www.justkannada.in):  ನಾಳೆಯಿಂದ ಪ್ರಾರಂಭವಾಗುವ ವಿಧಾನಮಂಡಲ ಅಧಿವೇಶನವನ್ನ ಚಿತ್ರೀಕರಿಸಲು ಮಾಧ್ಯಮಗಳಿಗೆ ನಿರ್ಬಂಧ ಹೇರಿರುವುದು ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಬಿಜೆಪಿಯವರ ನಿಜವಾದ ಬಣ್ಣ ಬಯಲಾಗುತ್ತದೆ ಎಂಬ ಭಯದಿಂದ  ಮಾಧ್ಯಮಗಳ ಮೇಲೆ ನಿರ್ಬಂಧ ಹೇರಲಾಗಿದೆ. ಎಂದು ಆರೋಪಿಸಿದರು. ಮಾಧ್ಯಮಗಳಿಗೆ ನಿರ್ಬಂಧ ಹೇರುವುದು ಅತ್ಯಂತ ತಪ್ಪು ನಿರ್ಧಾರವಾಗಿದೆ. ಮಾಧ್ಯಮಗಳಿಗೆ ನಿರ್ಬಂಧ ಹೇರುವ ನಿರ್ಧಾರ ಮೈತ್ರಿ ಸರ್ಕಾರದ ಅವಧಿಯಲ್ಲಿ ಮಾಡಿರಲಿಲ್ಲ ಎಂದು ಹೇಳಿದರು.

ವಿಧಾನಸಭೆಯ ಕಲಾಪದ ನೈಜ ಚಿತ್ರಣವನ್ನು ಜನರ ಮುಂದಿಡಲು ಮಾಧ್ಯಮಗಳಿಗೆ ಅವಕಾಶ ದೊರೆಯಬೇಕು. ನಿರ್ಬಂಧ ಹೇರದಂತೆ ಸಭಾಧ್ಯಕ್ಷರಲ್ಲಿ ಮನವಿ ಮಾಡುತ್ತೇನೆ. ನಾಳಿನ ಅಧಿವೇಶನದಲ್ಲಿ ಈ ಬಗ್ಗೆ ಧ್ವನಿ ಎತ್ತುತ್ತೇನೆ ಎಂದು ಹೆಚ್.ಡಿಕೆ ತಿಳಿಸಿದರು.

Key words:  media -not – Restriction –session-Former CM -HD Kumaraswamy