ಬೆಂಗಳೂರು,ಮೇ,22,2025 (www.justkannada.in): ಗೃಹ ಸಚಿವ ಡಾ.ಜಿ.ಪರಮೇಶ್ವರ್ ಒಡೆತನದ ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿಯಾದ ಬೆನ್ನಲ್ಲೆ ಇದೀಗ ಸಚಿವರ ದಂಡೇ ಪರಮೇಶ್ವರ್ ಅವರ ನಿವಾಸಕ್ಕೆ ಭೇಟಿ ನೀಡಿದೆ.
ಬೆಂಗಳೂರಿನ ಸದಾಶಿವನಗರದಲ್ಲಿರುವ ಸಚಿವ ಪರಮೇಶ್ವರ್ ನಿವಾಸಕ್ಕೆ ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ಸತೀಶ್ ಜಾರಕಿಹೊಳಿ, ದಿನೇಶ್ ಗುಂಡೂರಾವ್, ಚಲುವರಾಯಸ್ವಾಮಿ, ಎಂಎಲ್ ಸಿ ಬಿಕೆ ಹರಿಪ್ರಸಾದ್ ಭೇಟಿ ನೀಡಿದ್ದಾರೆ.
ಪರಮೇಶ್ವರ್ ಭೇಟಿಯಾದ ಬಳಿಕ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಇಡಿ ದಾಳಿ ಖಂಡಿಸಿ ದೇಶಾದ್ಯಂತ ಹೋರಾಟ ಮಾಡುತ್ತೇವೆ. ಸೋನಿಯಾ ಗಾಂಧಿ ಕೇಸ್ ನಿಂದ ಹಿಡಿದು ಎಲ್ಲಾ ವಿಚಾರವಾಗಿ ಹೋರಾಟ ಮಾಡುತ್ತೇವೆ. ನಿತ್ಯ ಹೋರಾಟ ಮಾಡುತ್ತೇವೆ. ನಮಗೆ ನ್ಯಾಯಾಲಯದ ಬಗ್ಗೆ ನಂಬಿಕೆ ಇದೆ ಎಂದರು.
Key words: Ministers, visit, Parameshwar, residence, DCM, DK Shivakumar