ಬೆಂಗಳೂರು,ಮೇ,22,2025 (www.justkannada.in): ರಾಮನಗರ ಜಿಲ್ಲೆ ಹೆಸರನ್ನ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಬದಲಾಯಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ ಮಾಡಿದರು.
ಇಂದು ಬೆಂಗಳೂರಿನಲ್ಲಿ ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯ ಬಳಿಕ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಜಿಲ್ಲೆಯಂದು ಸಂಪುಟದಲ್ಲಿ ತೀರ್ಮಾನ ಆಗಿದೆ. ರಾಮನಗರವೆ ಜಿಲ್ಲಾ ಕೇಂದ್ರ ಸ್ಥಾನ ಆಗಿರುತ್ತದೆ. ರಾಮನಗರದ ಜಿಲ್ಲಾ ಕೇಂದ್ರದಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲ. ಆದರೆ ಬೆಂಗಳೂರು ದಕ್ಷಿಣ ಎಂದು ರಾಮನಗರ ಜಿಲ್ಲೆಗೆ ಮರುನಾಮಕರಣ ಮಾಡಲಾಗಿದೆ ಎಂದು ತಿಳಿಸಿದದರು.
ಜಿಲ್ಲೆಯ ಹೆಸರು ಬದಲಾವಣೆ ರಾಜ್ಯದ ಅಧಿಕಾರವಿದೆ. ಆದರೆ ಕೇಂದ್ರಕ್ಕೆ ತಿಳಿಸಬೇಕಿತ್ತು ತಿಳಿಸಿದ್ದೇನೆ ಎಂದರು. ರಾಮನಗರ ಹೆಸರು ಬದಲಾವಣೆಗೆ ಈ ಹಿಂದೆ ಕೇಂದ್ರ ಸರ್ಕಾರ ಒಪ್ಪಿರಲಿಲ್ಲ.
Key words: Ramanagara, Name, Bangalore South, district, DCM DK Shivakumar