ಕೆಲಸ ಮಾಡುವಾಗಲೇ ಕಾಡಾನೆ ದಾಳಿಗೆ ಮಹಿಳೆ ಬಲಿ

ಹಾಸನ,ಮೇ,23,2025 (www.justkannada.in):  ಹಾಸನದಲ್ಲಿ ಮಾನವ ಕಾಡು ಪ್ರಾಣಿಗಳ ಸಂಘರ್ಷ ಮುಂದುವರೆದಿದ್ದು ಕಾಡಾನೆ ದಾಳಿಗೆ ಮಹಿಳೆ ಬಲಿಯಾಗಿರುವ ಘಟನೆ ಬೇಲೂರು ತಾಲ್ಲೂಕಿನ, ಬಿ ಕೊಡು ಗ್ರಾಮ ಪಂಚಾಯಿತಿ ಅಂಕಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ಚಂದ್ರಮ್ಮ (45) ಕಾಡಾನೆ ದಾಳಿಯಿಂದ ಸಾವನ್ನಪ್ಪಿದ ಮಹಿಳೆ. ಚಂದ್ರಮ್ಮ ಗಜೇಂದ್ರಪುರ ಗ್ರಾಮದ ನಿವಾಸಿಯಾಗಿದ್ದು,  ಡಾ.ಕರುಣ್ ಎಂಬುವವರ ಕಾಫಿ ತೋಟದ ಕೆಲಸಕ್ಕೆ ಬಂದಿದ್ದರು. ಈ ಮಧ್ಯೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಕಾಡಾನೆ ದಾಳಿ ಮಾಡಿದೆ.

ಚಂದ್ರಮ್ಮರನ್ನ ಸೊಂಡಲಿನಿಂದ ಎತ್ತಿ ಬಿಸಾಡಿ, ಕಾಲಿನಿಂದ ತುಳಿದು ಬರ್ಬರವಾಗಿ ಸಾಯಿಸಿರುವ ಕಾಡಾನೆ ಸಾಯಿಸಿದ್ದು ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ‌ ನಡೆದಿದ್ದು ಸೂಕ್ತ ಪರಿಹಾರಕ್ಕಾಗಿ ಗ್ರಾಮಸ್ಥರು ಆಗ್ರಹಿಸಿದ್ದಾರೆ.

Key words: Woman Death, wild elephant, attack