ಮುಂಬೈ,ಮೇ,24,2025 (www.justkannada.in): ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಇಬ್ಬರು ಕನ್ನಡಿಗರಿಗೆ ಸ್ಥಾನ ದೊರೆತಿದೆ.
18 ಸದಸ್ಯರ ಟೆಸ್ಟ್ ತಂಡದ ನಾಯಕರಾಗಿ ಯುವ ಆಟಗಾರ ಶುಭ್ಮನ್ ಗಿಲ್, ಉಪನಾಯಕರಾಗಿ ರಿಷಬ್ ಪಂತ್ ಆಯ್ಕೆಯಾಗಿದ್ದಾರೆ. ಟೆಸ್ಟ್ ತಂಡದಲ್ಲಿ ಕನ್ನಡಿಗರಾದ ಕೆ.ಎಲ್ ರಾಹುಲ್ , ಕರುಣ್ ನಾಯರ್, ಪ್ರಸಿದ್ ಕೃಷ್ಣಗೆ ಸ್ಥಾನ ಲಭಿಸಿದೆ.
ತಂಡದಲ್ಲಿ ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್ ಹಾಗೂ ಸಾಯಿ ಸುದರ್ಶನ್ ಕಾಣಿಸಿಕೊಂಡಿದ್ದಾರೆ. ಆಲ್ರೌಂಡರ್ಗಳಾಗಿ ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ. ಇನ್ನು ವೇಗದ ಬೌಲರ್ ಗಳಾಗಿ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್ ಹಾಗೂ ಅರ್ಷದೀಪ್ ಸಿಂಗ್ ಆಯ್ಕೆಯಾಗಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ ಈ ಕೆಳಗಿನಂತಿದೆ
ಶುಭ್ಮನ್ ಗಿಲ್ (ನಾಯಕ), ರಿಷಭ್ ಪಂತ್ (ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್, ಕರುಣ್ ನಾಯರ್, ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಧ್ರುವ್ ಜುರೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್.
ಭಾರತ ಮತ್ತು ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಹೀಗಿದೆ ನೋಡಿ
ಮೊದಲ ಟೆಸ್ಟ್: 20-24 ಜೂನ್, 2025
2ನೇ ಟೆಸ್ಟ್: ಜುಲೈ 2-6, 2025
3ನೇ ಟೆಸ್ಟ್: ಜುಲೈ 10-14, 2025
4ನೇ ಟೆಸ್ಟ್: 23-27 ಜುಲೈ, 2025
5ನೇ ಟೆಸ್ಟ್: 31 ಜುಲೈ-4 ಆಗಸ್ಟ್, 2025
Key words: India squad announced, England, Test series