ಭಾರಿ ಮಳೆಗೆ ಮನೆಯ ಗೋಡೆ ಕುಸಿದು 3 ವರ್ಷದ ಬಾಲಕಿ ಸಾವು

ಬೆಳಗಾವಿ,ಮೇ,26,2025 (www.justkannada.in):  ಕಳೆದ ಒಂದು ವಾರದಿಂದ ರಾಜ್ಯದ ಹಲವು ಭಾಗಗಳಲ್ಲಿ ವರುಣ ಅಬ್ಬರಿಸುತ್ತಿದ್ದು, ಈ ಮಧ್ಯೆ ಭಾರಿ ಮಳೆಗೆ ಮನೆಯ ಗೋಡೆ ಕುಸಿದು 3 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.

ಗೋಕಾಕ್ ತಾಲ್ಲೂಕಿನ  ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕೀರ್ತಿಲಾ ನಾಗೇಶ್ ಪೂಜಾರಿ (3) ಮೃತ ಬಾಲಕಿ ಮಲಗಿದ್ದಾಗ ಗೋಡೆ ಕುಸಿದು ಬಾಲಕಿ ಸಾವನ್ನಪ್ಪಿದ್ದಾಳೆ. ಬೆಳಗ್ಗಿನ ಜಾವ ಭಾರಿ ಮಳೆಗೆ ಗೋಡೆ ಕುಸಿದು ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಮತ್ತೋರ್ವ ಬಾಲಕಿ ಗಾಯಗೊಂಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳಕ್ಕೆ  ಶಹರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Key words: 3-year-old girl, dies , house, wall, collapses , heavy rain