Sunday, September 20, 2026

BDA Apartments

Home Front Page ರಾಜ್ಯಕ್ಕೆ ಬಿಜೆಪಿ ಅನ್ಯಾಯ ಮಾಡಿದೆ ಹೊರತು ಕಾಂಗ್ರೆಸ್ ಅನ್ಯಾಯ ಮಾಡಿಲ್ಲ-ಸಚಿವ ಕೆ.ಜೆ ಜಾರ್ಜ್

ರಾಜ್ಯಕ್ಕೆ ಬಿಜೆಪಿ ಅನ್ಯಾಯ ಮಾಡಿದೆ ಹೊರತು ಕಾಂಗ್ರೆಸ್ ಅನ್ಯಾಯ ಮಾಡಿಲ್ಲ-ಸಚಿವ ಕೆ.ಜೆ ಜಾರ್ಜ್

ಬೆಂಗಳೂರು,ಮೇ,27,2025 (www.justkannada.in): ರಾಜ್ಯ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತಿಕ್ಕಾಟ, ವಾದ ಪ್ರತಿವಾದ ಮುಂದುವರೆದಿದ್ದು, ಇದೀಗ ಬಿಜೆಪಿ ವಿರುದ್ದ ಇಂಧನ ಸಚಿವ ಕೆ.ಜೆ ಜಾರ್ಜ್ ವಾಗ್ದಾಳಿ ನಡೆಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಕೆ.ಜೆ ಜಾರ್ಜ್, ರಾಜ್ಯಕ್ಕೆ ಕಾಂಗ್ರೆಸ್ ಅನ್ಯಾಯ ಮಾಡಿಲ್ಲ. ಬಿಜೆಪಿಯವರೇ ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ. ರಾಜ್ಯಕ್ಕೆ ಕೇಂದ್ರ ಸರ್ಕಾರ ತೆರಿಗೆ ಹಣ ನೀಡಿಲ್ಲ. ಈ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಕಿಡಿಕಾರಿದರು.

ರಾಮನಗರ ಜಿಲ್ಲೆ ಹೆಸರು ಬದಲಾವಣೆಗೆ ಬಿಜೆಪಿ ಆಕ್ಷೇಪ ಕುರಿತು ಪ್ರತಿಕ್ರಿಯಿಸಿದ ಸಚಿವ ಕೆ.ಜೆ ಜಾರ್ಜ್,  ರಾಮನಗರ ಈಗ ಬೆಂಗಳೂರು ದಕ್ಷಿಣ ಜಿಲ್ಲೆಯಾಗಿದೆ.  ರಾಮನಗರ ಜಿಲ್ಲಾ ಕೇಂದ್ರವಾಗಿಯೇ ಇರುತ್ತೆ  ಮೊದಲು ಬೆಂಗಳೂರು ಗ್ರಾಮಾಂತರ ಜಿಲ್ಲೆ ಇತ್ತು. ನಂತರ ಬೆಂಗಳೂರು ದಕ್ಷಿಣ ಜಿಲ್ಲೆ ಆಗಿದೆ.  ರಾಮನಗರದವರು ಮೂಲತಃ ಬೆಂಗಳೂರಿನವರೇ ಎಂದರು.

Key words: BJP, injustice, state, Minister, K.J. George