Sunday, September 27, 2026

BDA Apartments

ಬಿಜೆಪಿ ಪಕ್ಷದಿಂದ ಎಸ್.ಟಿ ಸೋಮಶೇಖರ್, ಶಿವರಾಂ ಹೆಬ್ಬಾರ್ ಉಚ್ಚಾಟನೆ BDA JK_Adv BDA Adv
Home Front Page ಬಿಜೆಪಿ ಪಕ್ಷದಿಂದ  ಎಸ್.ಟಿ ಸೋಮಶೇಖರ್, ಶಿವರಾಂ ಹೆಬ್ಬಾರ್  ಉಚ್ಚಾಟನೆ

ಬಿಜೆಪಿ ಪಕ್ಷದಿಂದ  ಎಸ್.ಟಿ ಸೋಮಶೇಖರ್, ಶಿವರಾಂ ಹೆಬ್ಬಾರ್  ಉಚ್ಚಾಟನೆ

ಬೆಂಗಳೂರು,ಮೇ,27,2025 (www.justkannada.in): ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಬಿಜೆಪಿ ಶಾಸಕರಾದ ಎಸ್.ಟಿ ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ ರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.

ಶಿವರಾಮ್ ಹೆಬ್ಬಾರ್ ಹಾಗೂ ಎಸ್​ ಟಿ ಸೋಮಶೇಖರ್​ ಇಬ್ಬರನ್ನೂ ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಿ ಬಿಜೆಪಿ ಹೈಕಮಾಂಡ್ ಆದೇಶ ಹೊರಡಿಸಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ  ಶಾಸಕ ಶಿವರಾಮ್ ಹೆಬ್ಬಾರ್. ಬೆಂಗಳೂರಿನ ಯಶವಂತಪುರ ಕ್ಷೇತ್ರದಿಂದ ಎಸ್.ಟಿ.ಸೋಮಶೇಖರ್ ಮೂರನೇ ಬಾರಿ ಶಾಸಕರಾಗಿ ಆಯ್ಕೆ ಆಗಿದ್ದಾರೆ.

ಇಬ್ಬರು ಶಾಸಕರು ಬಿಜೆಪಿಯಲ್ಲಿ ಇದ್ದುಕೊಂಡು ಕಾಂಗ್ರೆಸ್ ನಾಯಕರ ಜೊತೆ ಹೆಚ್ಚು ಗುರುತಿಸಿಕೊಂಡಿದ್ದರು. ಅಲ್ಲದೆ ಬಿಜೆಪಿ ನಾಯಕರ ವಿರುದ್ದವೇ ಟೀಕಿಸಿದ್ದರು. ಹೀಗಾಗಿ, ಅವರನ್ನು ಉಚ್ಚಾಟನೆ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ.

2023ರಲ್ಲಿ ಇಬ್ಬರೂ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದು ಬಂದರು. ಆದರೆ, ಈಗ ಇಬ್ಬರೂ ಕಾಂಗ್ರೆಸ್ ಪಕ್ಷದ ಜೊತೆ ಹೆಚ್ಚು ಗುರುತಿಸಿಕೊಳ್ಳುತ್ತಿದ್ದರು. ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಕ್ಕಾಗಿ ಇಬ್ಬರನ್ನೂ ಉಚ್ಚಾಟನೆ ಮಾಡಲಾಗಿದೆ.

Key words: S.T. Somashekar, Shivaram Hebbar, expelled, BJP party