Sunday, August 2, 2026

BDA Apartments

Home Front Page ಮಳೆ ಹಾನಿ ಸ್ಥಳಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿ, ಸೂಕ್ತ ಪರಿಹಾರ ವ್ಯವಸ್ಥೆ ಮಾಡಿ- ಸಿಎಂ...

ಮಳೆ ಹಾನಿ ಸ್ಥಳಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿ, ಸೂಕ್ತ ಪರಿಹಾರ ವ್ಯವಸ್ಥೆ ಮಾಡಿ- ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು,ಮೇ,29,2025 (www.justkannada.in): ರಾಜ್ಯಾದ್ಯಂತ ಮಳೆರಾಯನ ಅಬ್ಬರ ಮುಂದುವರೆದಿದ್ದು, ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ, ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಮಳೆ ಅನಾಹುತದ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಹಿತಿ ಪಡೆದುಕೊಂಡಿದ್ದು,  ಮಳೆಯಿಂದಾಗಿ ಇದುವರೆಗೆ 45 ಕ್ಕೂ ಹೆಚ್ಚು ಮನೆಗಳಿಗೆ ಸಂಪೂರ್ಣ ಹಾನಿ,1385 ಮನೆಗಳಿಗೆ ಭಾಗಶಃ ಹಾನಿಯಾಗಿದೆ.

ಮಳೆ  ಹಾನಿ ಕುರಿತು ಸಮಗ್ರ ಮಾಹಿತಿ ತಿಳಿಯಲು ನಾಳೆ ಮತ್ತು ನಾಡಿದ್ದು ಡಿಸಿ, ಜಿ.ಪಂ ಸಿಇಒಗಳು ಉಸ್ತುವಾರಿ ಕಾರ್ಯದರ್ಶಿಗಳೊಂದಿಗೆ ಸಿಎಂ ಸಿದ್ದರಾಂಯ್ಯ ಸಭೆ ನಡೆಸಲಿದ್ದು ಮಳೆಹಾನಿ ಕುರಿತು ಚರ್ಚಿಸಲಿದ್ದಾರೆ.vtu

ರಾಜ್ಯದ 170 ತಾಲ್ಲೂಕುಗಳು ಪ್ರವಾಹ, ಭೂ ಕುಸಿತಕ್ಕೆ ಒಳಗಾಗಿವೆ ಎಂದು ಗುರುತಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ 2,296 ಕಾಳಜಿ ಕೇಂದ್ರ ತೆರೆಯಲು ಚಿಂತನೆ ನಡೆಸಲಾಗಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲೇ 201 ಪ್ರವಾಹ ಪೀಡಿತ  ಎಂದು ಗುರುತಿಸಲಾಗಿದೆ. ವಿಪತ್ತು ನಿರ್ವಹಣೆಗೆ ಸಮಾರೋಪಾದಿಯಲ್ಲಿ ಸಿದ್ದರಾಗಬೇಕು. ಭಾರಿ ಹಾನಿಯಾಗಿರುವ ಸ್ಥಳಗಳಿಗೆ ಕೂಡಲೇ ಜಿಲ್ಲಾ ಉಸ್ತುವಾರಿ ಸಚಿವರು ತೆರಳಿ ಪರಿಸ್ಥಿತಿ ಅವಲೋಕನ ಮಾಡಬೇಕು. ಆಯಾ ಜಿಲ್ಲೆಯ ಜಿಲ್ಲಾಧಿಕಾರಿ ನಿಗಾ ವಹಿಸಿ ಸೂಕ್ತ ಪರಿಹಾರ ವ್ಯವಸ್ಥೆ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ  ಖಡಕ್ ಸೂಚನೆ ನೀಡಿದ್ದಾರೆ.

Key words: CM Siddaramaiah, instructs , visit ,rain-damaged areas