ಮಂಗಳೂರು,ಮೇ,30,2025 (www.justkannada.in): ದಕ್ಷಿಣ ಕನ್ನಡ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು ಮಳೆಯಿಂದಾಗಿ ಮನೆ ಮೇಲೆ ಗುಡ್ಡ ಕುಸಿದು, ಒಂದೇ ಕುಟುಂಬದ ಐವರು ಅವಶೇಷಗಳಡಿ ಸಿಲುಕಿಕೊಂಡಿದ್ದು, ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ.
ಉಳ್ಳಾಲ ತಾಲೂಕಿನ ಉರುಮನೆ ಕೋಡಿ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಕಾಂತಪ್ಪ ಪೂಜಾರಿ ಎಂಬವರ ಮನೆ ಮೇಲೆ ಗುಡ್ಡ ಕುಸಿದ ಅವಘಡ ಸಂಭವಿಸಿದೆ. ಘಟನೆಯನಲ್ಲಿ ಮೃತಪಟ್ಟ ಮಹಿಳೆಯನ್ನು ಕಾಂತಪ್ಪ ಪೂಜಾರಿ ಪತ್ನಿ ಪ್ರೇಮ ಪೂಜಾರಿ ಎಂದು ಗುರುತಿಸಲಾಗಿದೆ. ಇದೀಗ ಮನೆಯ ಅವಶೇಷಗಳಡಿ ಮಹಿಳೆ ಹಾಗೂ ಇಬ್ಬರು ಮಕ್ಕಳು ಸಿಲುಕಿದ್ದಾರೆ. ಈ ಮೂವರ ರಕ್ಷಣೆಗೆ ಕಾರ್ಯಾತರಣೆ ತೀವ್ರಗೊಂಡಿದೆ. ಈಗಾಗಲೇ ಕಾಂತಪ್ಪ ಪೂಜಾರಿ ಹಾಗೂ ಸೀತಾರಾಮ ಅವರನ್ನು ರಕ್ಷಿಸಲಾಗಿದೆ. ಮನೆಯಡಿಲ್ಲಿರುವ ಅಶ್ವಿನಿ(33) ಹಾಗೂ ಮಕ್ಕಳಾದ ಆರ್ಯನ್(3) ಹಾಗೂ ಆರುಷ್(2) ರಕ್ಷಣೆಗೆ ಕಾರ್ಯಾಚರಣೆ ತೀವ್ರಗೊಂಡಿದೆ.
ಮಣ್ಣಿನ ಅವಶೇಷಗಳಡಿ ತಾಯಿ ಹಾಗೂ ಇಬ್ಬರು ಪುಟ್ಟ ಮಕ್ಕಳು ಮಣ್ಣಿನಡಿ ಸಿಲುಕಿದ್ದು ತಾಯಿ ಪ್ರೇಮ ಪೂಜಾರಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇನ್ನು ಮಗು ಬದುಕಿದ್ದು ಸ್ಥಳೀಯರು, ಎಸ್ ಡಿ ಆರ್ ಎಫ್ ತಂಡ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ.
Key words: Rain, landslide, Woman, dies, Mangalore