Thursday, September 10, 2026

BDA Apartments

Home Front Page UPSC ಹಾಗೂ ಬ್ಯಾಂಕಿಂಗ್ ಪಿ.ಒ ಪರೀಕ್ಷೆಗೆ ಉಚಿತ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

UPSC ಹಾಗೂ ಬ್ಯಾಂಕಿಂಗ್ ಪಿ.ಒ ಪರೀಕ್ಷೆಗೆ ಉಚಿತ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ, ಮೇ, 30,2025 (www.justkannada.in): ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿನಲ್ಲಿ ಯು.ಪಿ.ಎಸ್.ಸಿ ನಾಗರಿಕ ಸೇವೆ ಮತ್ತು ಬ್ಯಾಂಕಿಂಗ್ ಪಿ.ಒ ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ ನೀಡುತ್ತಿದ್ದು ರಾಜ್ಯದ ಹಿಂದುಳಿದ ವರ್ಗಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1 2(ಎ), 3(ಎ), 3(ಬಿ) ಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳು ಇಲಾಖಾ ವೆಬ್ಸೈಟ್ https://bcwd.karnataka.gov.in ಅಥವಾ sevasindhuservices.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನಾಂಕವಾಗಿರುತ್ತದೆ.vtu

ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್ಸೈಟ್ ಅನ್ನು ನೋಡಬಹುದು. ಹಾಗೂ ಸಹಾಯವಾಣಿ ಸಂಖ್ಯೆ: 8050370006 ಗೆ ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Key words: Applications, invited, free, pre-exam, coaching, UPSC, Banking PO exams