Tuesday, September 22, 2026

BDA Apartments

ಗಂಗೂಲಿ ದಾಖಲೆ ಸರಿಗಟ್ಟಿದ ವಿರಾಟ್ ಕೊಹ್ಲಿ BDA JK_Adv BDA Adv
Home Front Page ಗಂಗೂಲಿ ದಾಖಲೆ ಸರಿಗಟ್ಟಿದ ವಿರಾಟ್ ಕೊಹ್ಲಿ..

ಗಂಗೂಲಿ ದಾಖಲೆ ಸರಿಗಟ್ಟಿದ ವಿರಾಟ್ ಕೊಹ್ಲಿ..

ಪುಣೆ, ಅಕ್ಟೋಬರ್ 10, 2019 (www.justkannada.in): ಟೆಸ್ಟ್ ಕ್ರಿಕೆಟ್‌ನಲ್ಲಿ 50 ಪಂದ್ಯಗಳಲ್ಲಿ ಟೀಮ್ ಇಂಡಿಯಾ ನಾಯಕತ್ವ ವಹಿಸುವ ಮೂಲಕ ವಿರಾಟ್ ಕೊಹ್ಲಿ ಮಾಜಿ ನಾಯಕ ಸೌರವ್ ಗಂಗೂಲಿ ದಾಖಲೆಯನ್ನು ಮುರಿದಿದ್ದಾರೆ.

ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಜತೆಗೆ ಎಲೈಟ್ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಜೊತೆಗೆ ಧೋನಿ ಬಳಿಕ ಟೀಮ್ ಇಂಡಿಯಾ ಟೆಸ್ಟ್ ತಂಡವನ್ನು 50ಕ್ಕೂ ಹೆಚ್ಚು ಪಂದ್ಯಗಳಲ್ಲಿ ಮುನ್ನಡೆಸಿದ ಎರಡನೇ ಕಪ್ತಾನ ಎಂದೆನಿಸಿಕೊಂಡಿದ್ದಾರೆ.

ಗೆಲುವಿನ ವಿಚಾರಕ್ಕೆ ಬಂದರೆ ಆಗಲೇ ಸೌರವ್ ಗಂಗೂಲಿ ಹಾಗೂ ಎಂಎಸ್ ಧೋನಿ ದಾಖಲೆಯನ್ನು ಮುರಿದಿರುವ ವಿರಾಟ್ ಕೊಹ್ಲಿ ಈಗಾಗಲೇ 29 ಗೆಲುವು ದಾಖಲಿಸಿ, ಭಾರತದ ಅತ್ಯಂತ ಯಶಸ್ವಿ ಕಪ್ತಾನ ಎಂಬ ಹಿರಿಮೆಗೆ ಪಾತ್ರವಾಗಿದ್ದಾರೆ.