Sunday, September 13, 2026

BDA Apartments

ಕಾಡಾನೆ ದಾಳಿಗೆ ರೈತ‌ ಸಾವು: ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರ ಆಕ್ರೋಶ BDA JK_Adv BDA Adv
Home Crime ಕಾಡಾನೆ ದಾಳಿಗೆ ರೈತ‌ ಸಾವು: ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರ ಆಕ್ರೋಶ

ಕಾಡಾನೆ ದಾಳಿಗೆ ರೈತ‌ ಸಾವು: ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರ ಆಕ್ರೋಶ

ಕೊಡಗು,ಜೂನ್,7,2025 (www.justkannada.in):  ಕಾಡಾನೆ ದಾಳಿಗೆ ವೃದ್ಧ ರೈತ‌ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆಯ ಕರಡಿಗೋಡು ಗ್ರಾಮದಲ್ಲಿ  ನಡೆದಿದೆ.

ಪುರುಷೋತ್ತಮ (72 )ಮೃತಪಟ್ಟ  ರೈತ. ಕಾಫಿ ತೋಟದಿಂದ ಮನೆಗೆ ಬರುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ್ದು ದಾಳಿಗೆ ಪುರುಷೋತ್ತಮ್ ಮೃತಪಟ್ಟಿದ್ದಾರೆ.  ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಭೇಟಿ  ನೀಡಿ ಪರಿಶೀಲನೆ ನಡೆಸಿದ್ದಾರೆ.

ಜಿಲ್ಲೆಯಲ್ಲಿ ಕಾಡಾನೆಗಳ ದಾಳಿ ಹೆಚ್ಚಾಗಿದ್ದು, ಕಾಫಿ ತೋಟದಲ್ಲಿ ಕಾಡಾನೆಗಳು ಬೀಡು ಬಿಟ್ಟಿವೆ. ಕಳೆದ ಹಲವು  ತಿಂಗಳಿನಿಂದಲೂ ಕರಡಿಗೋಡು ಸುತ್ತಮುತ್ತಲ ಕಾಫಿ ತೋಟದಲ್ಲಿ  ದಿನನಿತ್ಯ ಕಾಡಾನೆಗಳ ಹಿಂಡು ಕಾಣಿಸಿಕೊಳ್ಳುತ್ತಿದ್ದು, ಕಾಡಾನೆ ಕಾಡಿಗಟ್ಟಲು ಅರಣ್ಯ ಇಲಾಖೆ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ.

ಇನ್ನು ಕಾಡಾನೆ ಹಾವಳಿ ತಡೆಗಟ್ಟುವಲ್ಲಿ ಅರಣ್ಯ ಇಲಾಖೆ ವಿಫಲವಾಗಿದೆ ಎಂದು ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.vtu

Key words: Farmer, dies,  wild elephant, attack