ಬೆಂಗಳೂರು,ಜೂನ್,9,2025 (www.justkannada.in): ವಿಧಾನಸೌಧದಲ್ಲಿ ವಿಜಯೋತ್ಸವ ಆಚರಣೆ ವೇಳೆ ಯಾರೂ ಸತ್ತಿಲ್ಲ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಷ್ಟೇ ಕಾಲ್ತುಳಿತದಿಂದ ಜನ ಸಾವನ್ನಪ್ಪಿದ್ದಾರೆ ಎಂದು ಹೇಳಿಕೆ ನೀಡಿದ್ದ ಸಿಎಂ ಸಿದ್ದರಾಮಯ್ಯ ವಿರುದ್ದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಗುಡುಗಿದ್ದಾರೆ.
ಈ ಕುರಿತು ಟ್ವಿಟ್ ಮಾಡಿರುವ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ವಿಧಾನಸೌಧ ಮೆಟ್ಟಿಲು ಮೇಲೆ ಸರಕಾರ ವಿಜಯೋತ್ಸವ ಆಚರಿಸಿತು. ಅಲ್ಲಿ ಯಾರೂ ಸಾಯಲಿಲ್ಲ! ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಷ್ಟೇ ಕಾಲ್ತುಳಿತ ಸಂಭವಿಸಿ ಜನ ಸತ್ತಿದ್ದಾರೆ ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನವರೇ.. ನೀವು ಕರ್ನಾಟಕದ ಮುಖ್ಯಮಂತ್ರಿಯೋ ಅಥವಾ ವಿಧಾನಸೌಧ ಮೆಟ್ಟಿಲುಗಳಿಗಷ್ಟೇ ಮುಖ್ಯಮಂತ್ರಿಯೋ!? ದಯವಿಟ್ಟು ಹೇಳುವಿರಾ? ಎಂದು ಪ್ರಶ್ನಿಸಿದ್ದಾರೆ.
ದುರಂತದ ಹೊಣೆಯನ್ನು ಪೊಲೀಸರ ಮೇಲಷ್ಟೇ ಎತ್ತಿಹಾಕಿ ‘ಕೈ’ ತೊಳೆದುಕೊಳ್ಳುವುದು ಎಷ್ಟು ಸರಿ? ಪ್ರತಿಪಕ್ಷಗಳನ್ನು ದೂರಿ ಪಾರಾಗುವ ಹುನ್ನಾರವೇಕೆ? ಎಂದು ಟ್ವೀಟ್ ಮಾಡಿ ‘ಮೆಟ್ಟಿಲುಮುಖ್ಯಮಂತ್ರಿ’ ಎಂದು ಟೀಕಿಸಿದ್ದಾರೆ.
Key words: Chief Minister, Karnataka, Siddaramaiah, Vidhan Soudha, HDK