Friday, September 18, 2026

BDA Apartments

ಕಾಲ್ತುಳಿತ ಪ್ರಕರಣ: ಸಿಎಂ, ಡಿಸಿಎಂ ವಿರುದ್ಧ ಸ್ವಾಮೀಜಿಗಳಿಂದ ದೂರು BDA JK_Adv BDA Adv
Home Crime ಕಾಲ್ತುಳಿತ ಪ್ರಕರಣ: ಸಿಎಂ, ಡಿಸಿಎಂ ವಿರುದ್ಧ ಸ್ವಾಮೀಜಿಗಳಿಂದ ದೂರು

ಕಾಲ್ತುಳಿತ ಪ್ರಕರಣ: ಸಿಎಂ, ಡಿಸಿಎಂ ವಿರುದ್ಧ ಸ್ವಾಮೀಜಿಗಳಿಂದ ದೂರು

ಬೆಂಗಳೂರು,ಜೂನ್,9,2025 (www.justkannada.in):  ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಸಂಭವಿಸಿ 11 ಜನರು ಆರ್ ಸಿಬಿ ಅಭಿಮಾನಿಗಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವ ಪರಮೇಶ್ವರ್ ಸೇರಿದಂತೆ ನಾಲ್ವರ ವಿರುದ್ಧ ಪೊಲೀಸ್ ಠಾಣೆಗೆ ವಿವಿಧ ಸ್ವಾಮೀಜಿಗಳು ದೂರು ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವ ಪರಮೇಶ್ವರ್ ವಿರುದ್ದ ಪ್ರಣವಾನಂದ ಸ್ವಾಮೀಜಿ ನೇತೃತ್ವದ ನಿಯೋಗ ಕಬ್ಬನ್ ಪಾರ್ಕ್ ಠಾಣೆಗೆ ದೂರು ನೀಡಿದೆ. ಆರ್ ಸಿಬಿ ಮ್ಯಾನೇಜ್ಮೆಂಟ್ ವಿರುದ್ಧವೂ ದೂರು ನೀಡಲಾಗಿದೆ.

ಪ್ರಣವಾನಂದ ಶ್ರೀ, ಕುಂಬಾರ ಗುಂಡಯ್ಯ ಶ್ರೀ ಸೇರಿದಂತೆ ಮೂವರು ಸ್ವಾಮೀಜಿಗಳು ದೂರು ದಾಖಲಿಸಿದ್ದಾರೆ. ಕಾಲ್ತುಳಿತ ದುರಂತದಲ್ಲಿ 11 ಜನರ ಸಾವಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.vtu

Key words: Stampede case, Complaints, Swamijis, against, CM, DCM