ಕಿದ್ವಾಯಿ ಕ್ಯಾನ್ಸರ್ ಸಂಸ್ಥೆಯಲ್ಲಿ ಮೊದಲ ಸರ್ಕಾರಿ ಪ್ರೋಟಾನ್ ಚಿಕಿತ್ಸಾ ಘಟಕ: 500 ಕೋಟಿ ರೂ. ಅನುದಾನಕ್ಕೆ ಬೇಡಿಕೆ

ಬೆಂಗಳೂರು, ಜೂನ್, 9,2025 (www.justkannada.in): ಸಾರ್ವಜನಿಕ ಆರೋಗ್ಯ ಸೇವೆಯಲ್ಲಿ ಕ್ಯಾನ್ಸರ್ ಚಿಕಿತ್ಸೆಯಲ್ಲಿ ಅತ್ಯಾಧುನಿಕತೆ ಹಾಗೂ ವಿಶೇಷ ಸೌಲಭ್ಯವನ್ನು ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಮಹತ್ವದ ಹೆಜ್ಜೆ ಇಟ್ಟಿದೆ.

ವೈದ್ಯಕೀಯ ಶಿಕ್ಷಣ ಇಲಾಖೆಯು ಕಿದ್ವಾಯಿ ಸ್ಮಾರಕ ಆಂಕೊಲಾಜಿ ಸಂಸ್ಥೆಯಲ್ಲಿ (ಕೆಎಂಐಒ) ದೇಶದಲ್ಲೇ ಮೊದಲ ಬಾರಿಗೆ  ಪ್ರೋಟಾನ್ ಚಿಕಿತ್ಸಾ ಸೌಲಭ್ಯವನ್ನು ಸ್ಥಾಪಿಸಲು ಮುಂದಾಗಿದೆ. ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್‌ ಅವರ ದೂರದೃಷ್ಟಿಯೊಂದಿಗೆ ಈ ಚಿಕಿತ್ಸಾ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.

ಇತ್ತೀಚೆಗೆ ಬೆಂಗಳೂರಿಗೆ ಆಗಮಿಸಿದ್ದ ಕೇಂದ್ರ ಆರೋಗ್ಯ ಸಚಿವ ಜೆಪಿ ನಡ್ಡಾ ಅವರೊಂದಿಗಿನ ಸಭೆಯಲ್ಲಿ ಈ ಸುಧಾರಿತ ಚಿಕಿತ್ಸಾ ಸೌಲಭ್ಯವನ್ನು ಕಿದ್ವಾಯಿ ಸಂಸ್ಥೆಯಲ್ಲಿ ಸ್ಥಾಪಿಸಲು ಕೇಂದ್ರದಿಂದ 500 ಕೋಟಿ ರೂ. ಅನುದಾನ ಕೋರಿ ಪ್ರಸ್ತಾವನೆಯನ್ನು ಸಲ್ಲಿಸಿದರು.

ಭಾರತದ ಪ್ರಮುಖ ಕ್ಯಾನ್ಸರ್ ಆಸ್ಪತ್ರೆಗಳಲ್ಲಿ ಒಂದಾದ ಕೆಎಂಐಒದಲ್ಲಿ ವಾರ್ಷಿಕವಾಗಿ 21,000 ಕ್ಕೂ ಹೆಚ್ಚು ಹೊಸ ಕ್ಯಾನ್ಸರ್ ಪ್ರಕರಣಗಳು ದಾಖಲಾಗುತ್ತಿದೆ. ವಿಕಿರಣ ಚಿಕಿತ್ಸೆಯಲ್ಲಿ ಗೆಡ್ಡೆಯ ಅಕ್ಕಪಕ್ಕದ ಭಾಗಗಳಿಗೂ ಪರಿಣಾಮವಾಗುವ ಸಾಧ್ಯತೆ ಇರುತ್ತದೆ. ಆದರೆ ಸುಧಾರಿತ ರೂಪವಾದ ಪ್ರೋಟಾನ್ ಚಿಕಿತ್ಸೆಯು ಗೆಡ್ಡೆಯ ಬಳಿ ನಿರ್ಣಾಯಕ ಅಂಗಗಳಿಗೆ ಯಾವುದೇ ರೀತಿಯ ಹಾನಿ ಮಾಡುವುದಿಲ್ಲ. ವಿಶೇಷವಾಗಿ ಸೂಕ್ಷ್ಮ ಪ್ರದೇಶಗಳಲ್ಲಿ ದೀರ್ಘ ಕಾಲೀನ ಅಡ್ಡಪರಿಣಾಮಗಳನ್ನು ಕಡಿಮೆ ಮಾಡುತ್ತದೆ.

“ಗಾಮಾ ಕಿರಣಗಳು ಅಥವಾ ಎಕ್ಸ್-ಕಿರಣಗಳನ್ನು ಬಳಸುವುದು ಸಾಂಪ್ರದಾಯಿಕ ರೇಡಿಯೊ ಥೆರಪಿಗಿಂತ ಭಿನ್ನವಾಗಿರುತ್ತದೆ.   ಪ್ರೋಟಾನ್ ಚಿಕಿತ್ಸೆಯು ನಿಖರವಾಗಿ ಸಮಸ್ಯೆ ಇರುವ ಜಾಗಕ್ಕೆ ಮಾತ್ರ ಚಿಕಿತ್ಸೆ ಒದಗಿಸುತ್ತದೆ. ಇದರಿಂದ ಹಾನಿ ಪ್ರಮಾಣ ಕಡಿಮೆ ಎಂದು ಡಾ. ಪಾಟೀಲ್ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ಈ ಪ್ರಸ್ತಾವನೆಯು ಮಕ್ಕಳ ಕ್ಯಾನ್ಸರ್‌ ಪ್ರಕರಣಗಳು, ವಿಶೇಷವಾಗಿ NF-1 ಮತ್ತು ರೆಟಿನೋಬ್ಲಾಸ್ಟೊಮಾದಂತಹ ಆನುವಂಶಿಕ ಪ್ರಕಾರಗಳು ಮತ್ತು ಕಣ್ಣು, ಕಕ್ಷೆ, ತಲೆಬುರುಡೆಯ ಬುಡ, ಬೆನ್ನುಮೂಳೆ, ಯಕೃತ್ತು, ಪ್ರಾಸ್ಟೇಟ್, ಸ್ತನ, ತಲೆ ಮತ್ತು ಕುತ್ತಿಗೆ ಮತ್ತು ಪ್ಯಾರಾನಾಸಲ್ ಸೈನಸ್‌ ಗಳ ಕ್ಯಾನ್ಸರ್‌ ಗಳು ಸೇರಿದಂತೆ ವ್ಯಾಪಕ ಶ್ರೇಣಿಯ ಇತರ ಮಾರಕ ಕಾಯಿಲೆಗಳಿಗೆ ಚಿಕಿತ್ಸೆ ನೀಡುತ್ತದೆ. ಮರು-ವಿಕಿರಣ ಪ್ರಕರಣಗಳು ಮತ್ತು ತೆಗೆದುಹಾಕಲಾಗದ ಗೆಡ್ಡೆಗಳ ಪ್ರಕರಣಗಳಿಗೂ ಬಳಸಬಹುದಾಗಿದೆ. ಇದರಿಂದ ವಾಸಿಯಾಗುವ ಭರವಸೆ ಹೆಚ್ಚಾಗಿರುತ್ತದೆ ಎಂದು ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್‌ ವಿವರಿಸಿದ್ದಾರೆ.vtu

2025 ರ ವೇಳೆಗೆ ಭಾರತದಲ್ಲಿ 1.2 ಲಕ್ಷಕ್ಕೂ ಹೆಚ್ಚು ರೋಗಿಗಳಿಗೆ ಪ್ರೋಟಾನ್ ಚಿಕಿತ್ಸೆಯ ಅಗತ್ಯವಿರಬಹುದು ಎಂದು ಅಂದಾಜಿಸಲಾಗಿದೆ. KMIO ನಲ್ಲಿರುವ ಈ ಸೌಲಭ್ಯವು ಅತ್ಯಾಧುನಿಕ ಕ್ಯಾನ್ಸರ್ ಆರೈಕೆಯನ್ನು ಒದಗಿಸುವುದಲ್ಲದೆ, NIMHANS ಮತ್ತು ಇಂದಿರಾ ಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯಿಂದ ಉಲ್ಲೇಖಿತ ಪ್ರಕರಣಗಳಿಗೂ ಚಿಕಿತ್ಸೆ ನೀಡಲು ಸಹಕಾರಿಯಾಗುತ್ತದೆ ಎಂದು ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

ಪ್ರೋಟಾನ್ ಚಿಕಿತ್ಸೆಯ ಪ್ರಮುಖ ಪ್ರಯೋಜನಗಳು

*ಮಕ್ಕಳ ಮತ್ತು ಆನುವಂಶಿಕ ಗೆಡ್ಡೆಗಳಿಗೆ ಹೆಚ್ಚು ಪರಿಣಾಮಕಾರಿ

*ಚಿಕಿತ್ಸೆಯ ನಂತರ ವೇಗವರ್ಧಿತ ಚೇತರಿಕೆ

*ದ್ವಿತೀಯಕ ಕ್ಯಾನ್ಸರ್‌ಗಳ ಸಾಧ್ಯತೆ ಕಡಿಮೆ

*ದೀರ್ಘಾವಧಿಯ ಬದುಕುಳಿಯುವಿಕೆ

ENGLISH SUMMARY..

India’s First Government Proton Therapy Unit Proposed at Kidwai Cancer Institute: Rs 500 Cr Grant Sought from Centre

Bengaluru, June 9: In a landmark move set to redefine cancer treatment in public healthcare, the department of medical education plans to establish the country’s first government-run proton therapy facility at Kidwai Memorial Institute of Oncology (KMIO).

Minister for medical education and skill development Dr. Sharan Prakash Patil, during a recent meeting with Union Health Minister JP Nadda in Bengaluru, submitted a proposal seeking a Rs 500 crore grant from the Centre to set up this advanced treatment facility at KMIO.

Recognized as one of the premier cancer hospitals in India, KMIO registers over 21,000 new cancer cases annually. Proton therapy—an advanced form of radiation treatment—offers superior tumour control while safeguarding critical organs near the tumour, thus reducing long-term side effects, especially in sensitive areas.

“Unlike conventional radiotherapy that uses high-energy gamma rays or X-rays—which can impact healthy tissues beyond the tumour—proton therapy delivers precise, targeted doses with significantly reduced collateral damage,” Dr. Patil stated in his letter.

The proposal highlights the therapy’s benefit in treating paediatric cancers, especially hereditary types like NF-1 and retinoblastoma, and a wide range of other malignancies including cancers of the eye, orbit, skull base, spine, liver, prostate, breast, head & neck, and paranasal sinuses. It also holds promise for re-irradiation cases and unresectable tumours.

QUOTE
It is estimated that over 1.2 lakh patients in India may require proton therapy by 2025. The facility at KMIO will not only provide cutting-edge cancer care with less toxicity but also support referral cases from NIMHANS and Indira Gandhi Institute of Child Health
Dr. Sharan Prakash Patil, Minister for medical education and skill development

Proton Therapy: Key Benefits

*Highly effective for paediatric and hereditary tumours
*Accelerated recovery post-treatment
*Minimal risk of developing secondary cancers
*Improved long-term survival rates

Key words: Proton Therapy Unit, Kidwai Cancer Institute, Minister, Sharana prakash patil