Saturday, September 19, 2026

BDA Apartments

ವಿಮಾನ ದುರಂತ ಸ್ಥಳ ಮತ್ತು ಆಸ್ಪತ್ರೆಗೆ ಪ್ರಧಾನಿ ಮೋದಿ ಭೇಟಿ BDA JK_Adv BDA Adv
Home Front Page ವಿಮಾನ ದುರಂತ ಸ್ಥಳ ಮತ್ತು ಆಸ್ಪತ್ರೆಗೆ ಪ್ರಧಾನಿ ಮೋದಿ ಭೇಟಿ

ವಿಮಾನ ದುರಂತ ಸ್ಥಳ ಮತ್ತು ಆಸ್ಪತ್ರೆಗೆ ಪ್ರಧಾನಿ ಮೋದಿ ಭೇಟಿ

ಅಹಮದಾಬಾದ್, ಜೂನ್,13,2025 (www.justkannada.in): ನಿನ್ನೆ ಗುಜರಾತ್ ನ ಅಹಮದಾಬಾದ್ ನ ಮೇಘಾನಿ ಪ್ರದೇಶದಲ್ಲಿ ಏರ್ ಇಂಡಿಯಾ ಪತನಗೊಂಡು 241 ಮಂದಿ ಸಾವನ್ನಪ್ಪಿದ ದುರಂತ ನಡೆದಿದ್ದು ಓರ್ವ ವ್ಯಕ್ತಿ ಬದುಕುಳಿದಿದ್ದಾರೆ.  ಈ ಮಧ್ಯೆ ದುರಂತ ನಡೆದ ಸ್ಥಳಕ್ಕೆ ಮತ್ತು ಆಸ್ಪತ್ರೆಗೆ ಪ್ರಧಾನಿ ನರೇಂದ್ರ ಮೋದಿ ಇಂದು ಭೇಟಿ ನೀಡಿದ್ದಾರೆ.

ದುರಂತ ನಡೆದ ಮೇಘಾನಿ ಪ್ರದೇಶಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಬಳಿಕ ಅಹಮದಾಬಾದ್ ನ ಸಿವಿಲ್ ಆಸ್ಪತ್ರೆಗೆ ಭೇಟಿ ಕೊಟ್ಟು ಅಲ್ಲಿ ಗಾಯಾಳುಗಳ  ಆರೋಗ್ಯ ವಿಚಾರಿಸಿದರು.

ಇದೇ ವೇಳೆ ದುರಂತದಲ್ಲಿ ಎಮರ್ಜನ್ಸಿ ಡೋರ್ ನಿಂದ ಜಿಗಿದು ಪ್ರಾಣಾಪಾಯದಿಂದ ಪಾರಾದ ರಮೇಶ್ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ ಘಟನೆ ಬಗ್ಗೆ ಮಾಹಿತಿ ಪಡೆದು ಧೈರ್ಯ ತುಂಬಿದರು. ಇನ್ನು ಏರ್ ಪೋರ್ಟ್ ನಲ್ಲಿ ಪ್ರಧಾನಿ ಮೋದಿ ಸಭೆ ನಡೆಸಲಿದ್ದಾರೆ ಎನ್ನಲಾಗಿದೆ.vtu

Key words: PM Modi, visits, plane crash, , hospital