ಬೆಂಗಳೂರು,ಜೂನ್,13,2025 (www.justkannada.in): ಬೆಳ್ಳಂ ಬೆಳಗ್ಗೆ. ಆಂಧ್ರ ಸಾರಿಗೆ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕಿನಲ್ಲಿ ನಡೆದಿದೆ.
ಹೊಸಕೋಟೆ ತಾಲೂಕಿನ ಗೊಟ್ಟಿಪುರ ಗೇಟ್ ಬಳಿ ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೇಶವರೆಡ್ಡಿ ( 44 ) ತುಳಸಿ ( 21 ) ಪ್ರಣತಿ ( 4 ) ಮತ್ತು ಒಂದು ವರ್ಷದ ಮಗು ಮೃತಪಟ್ಟವರು. ಸ್ಥಳದಲ್ಲೇ ಮೂವರು ಸಾವನ್ನಪ್ಪಿದರೆ ಆಸ್ವತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮತ್ತೊಂದು ಮಗು ಸಾವನ್ನಪ್ಪಿದೆ.
ತಿರುಪತಿಯಿಂದ ಬೆಂಗಳೂರಿಗೆ ಬರುತ್ತಿದ್ದ AP 03 Z 0190 ಸಂಖ್ಯೆಯ ಆಂಧ್ರ ಸಾರಿಗೆ ಬಸ್ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದೆ. 16 ಜನ ಪ್ರಯಾಣಿಕರಿಗೆ ಗಾಯಗಳಾಗಿದ್ದು ಇಬ್ಬರ ಸ್ಥಿತಿ ಗಂಭೀರವಾಗಿದೆ. ಹೊಸಕೋಟೆಯ ಸಿಲಿಕಾನ್ ಸಿಟಿ ಆಸ್ವತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಆಂಧ್ರ ಸಾರಿಗೆ ಬಸ್ ನ ಚಾಲಕ ನಿದ್ದೆ ಮಂಪರಿನಲ್ಲಿ ಒವರ್ ಟೇಕ್ ಮಾಡಲು ಹೋಗಿ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ರಭಸಕ್ಕೆ ಬಸ್ಸಿನ ಮುಂಭಾಗ ಮತ್ತು ಒಂದು ಬದಿ ಸಂಪೂರ್ಣ ಜಖಂ ಆಗಿದ್ದು, ಹೊಸಕೋಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Key words: Four death, horrific accident, bus, lorry