ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

ಬೆಂಗಳೂರು, ಜೂನ್​ 13,2025 (www.justkannada.in): ಯೋಗೀಶ್ ಗೌಡ ಹತ್ಯೆ ಪ್ರಕರಣದ ಆರೋಪಿ  ಕಾಂಗ್ರೆಸ್ ಶಾಸಕ ವಿನಯ್​​ ಕುಲಕರ್ಣಿ ಅವರನ್ನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಸಿಬಿಐ ವಶಕ್ಕೆ ನೀಡಿ ಆದೇಶಿಸಿದೆ.

ಇತ್ತೀಚೆಗೆ ಸುಪ್ರೀಂ ಕೋರ್ಟ್ ಅವರ ಜಾಮೀನನ್ನು ರದ್ದುಪಡಿಸಿ, ಒಂದು ವಾರದೊಳಗೆ ನ್ಯಾಯಾಲಯದ ಮುಂದೆ ಹಾಜರಾಗುವಂತೆ ವಿನಯ್ ಕುಲಕರ್ಣಿಗೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು (ಶುಕ್ರವಾರ) ನ್ಯಾಯಾಲಯದ ಮುಂದೆ ಶರಣಾಗಿದ್ದಾರೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ವಿನಯ್ ಕುಲಕರ್ಣಿ ಹಾಜರಾಗಿದ್ದು, ಕೋರ್ಟ್ ಅವರನ್ನು ಸಿಬಿಐ ವಶಕ್ಕೆ ನೀಡಿ ಆದೇಶ ಹೊರಡಿಸಿದೆ.

2016 ರ ಜೂ. 15 ರಂದು ಧಾರವಾಡ ತಾಲೂಕಿನ ಹೆಬ್ಬಳ್ಳಿ ಕ್ಷೇತ್ರದ ಜಿಲ್ಲಾ ಪಂಚಾಯತಿ ಸದಸ್ಯನಾಗಿದ್ದ ಯೋಗೀಶಗೌಡನನ್ನು ಅವರದ್ದೇ ಮಾಲೀಕತ್ವದ ಜಿಮ್​ನಲ್ಲಿ ಭೀಕರವಾಗಿ ಹತ್ಯೆಗೈಯ್ಯಲಾಗಿತ್ತು. ಇದರಲ್ಲಿ ಮಾಜಿ ಸಚಿವ ಹಾಗೂ ಹಾಲಿ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಕೈವಾಡ ಇದೆ ಎಂದು ಆರೋಪಿಸಿ, ಅವರನ್ನು 2020 ನವೆಂಬರ್ 5 ರಂದು ಸಿಬಿಐ ಬಂಧಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಸುಪ್ರೀಂಕೋರ್ಟ್​ ವಿನಯ್ ಕುಲಕರ್ಣಿ ಜಾಮೀನು ರದ್ದುಗೊಳಿಸಿ ಆದೇಶಿಸಿತ್ತು.vtu

Key words: Congress, MLA, Vinay Kulkarni , CBI, custody