Friday, August 14, 2026

BDA Apartments

Home Front Page ಸಾರಿಗೆ ಇಲಾಖೆ ಕಾರ್ಯಾಚರಣೆ: ಒಂದೇ ದಿನ 103 ಬೈಕ್ ಟ್ಯಾಕ್ಸಿಗಳು ಸೀಜ್.

ಸಾರಿಗೆ ಇಲಾಖೆ ಕಾರ್ಯಾಚರಣೆ: ಒಂದೇ ದಿನ 103 ಬೈಕ್ ಟ್ಯಾಕ್ಸಿಗಳು ಸೀಜ್.

ಬೆಂಗಳೂರು ,ಜೂನ್,17,2025 (www.justkannada.in): ನಿಷೇಧದ ಬಳಿಕವೂ ರಸ್ತೆಗಿಳಿದಿದ್ದ ಬೈಕ್ ಟ್ಯಾಕ್ಸಿಗಳಿಗೆ ಶಾಕ್ ನೀಡಿದ ಸಾರಿಗೆ ಇಲಾಖೆ  ಬೆಂಗಳೂರಿನಲ್ಲಿ ಕಾರ್ಯಾಚರಣೆ ನಡೆಸಿ ನಿನ್ನೆ ಒಂದೇ ದಿನದಲ್ಲಿ  103 ‘ಬೈಕ್ ಟ್ಯಾಕ್ಸಿಗಳನ್ನು ಸೀಜ್ ಮಾಡಿದೆ.

11 ಆರ್ ಟಿ ಒ ವ್ಯಾಪ್ತಿಯಲ್ಲಿ ಬೈಕ್ ಟ್ಯಾಕ್ಸಿ ಓಡಿಸುತ್ತಿದ್ದ ಬೈಕ್ ಟ್ಯಾಕ್ಸಿಯನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಕೋರ್ಟ್ ಆದೇಶದ ಬಳಿಕವೂ ಬೈಕ್ ಟ್ಯಾಕ್ಸಿಗಳು ರಸ್ತೆಗಿಳಿದಿದ್ದವು. ಈ ಹಿನ್ನೆಲೆಯಲ್ಲಿ ಆರ್ ಟಿಒ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಸಂಚಾರ ನಡೆಸುತ್ತಿದ್ದ ಬೈಕ್ ಟ್ಯಾಕ್ಸಿ ಗಳನ್ನು ಸೀಜ್ ಮಾಡಿದ್ದಾರೆ.

ಬೆಂಗಳೂರು ಕೇಂದ್ರ, ಬೆಂಗಳೂರು ಪಶ್ಚಿಮ, ಬೆಂಗಳೂರು ಪೂರ್ವ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಜ್ಞಾನಭಾರತಿ, ದೇವನಹಳ್ಳಿ, ಯಲಹಂಕ, ಎಲೆಕ್ಟ್ರಾನಿಕ್‌ ಸಿಟಿ, ಕೆ.ಆರ್‌. ಪುರ, ಚಂದ್ರಾ‍ಪುರ ಪ್ರಾದೇಶಿಕ ಸಾರಿಗೆ ಕಚೇರಿಯ ಅಧಿಕಾರಿಗಳು ಕಾರ್ಯಾಚರಣೆ ನಡೆಸಲಾಗಿದೆ.

ಉಬರ್‌, ರ‍್ಯಾಪಿಡೊ, ಓಲಾ ಮುಂತಾದ ಕಂಪನಿಗಳ ಅಡಿಯಲ್ಲಿ ಬೈಕ್‌ ಟ್ಯಾಕ್ಸಿಗಳು ಕಾರ್ಯನಿರ್ವಹಿಸುತ್ತಿದ್ದವು. ಹಾಗೆಯೇ ಇದೇ ಸಂದರ್ಭದಲ್ಲಿ ‘ನಮ್ಮ ಹೊಟ್ಟೆಗೆ ಹೊಡೆಯಬೇಡಿ. ಬೈಕ್‌ ಟ್ಯಾಕ್ಸಿಗಳಿಗಾಗಿಯೇ ಹೊಸ ನಿಯಮ ರೂಪಿಸಿ’ ಎಂದು ಬೈಕ್‌ ಟ್ಯಾಕ್ಸಿ ಅಸೋಸಿಯೇಶನ್‌ ಆಗ್ರಹಿಸಿದೆ.vtu

Key words: Transport Department, 103 bike taxis, seized