Sunday, September 27, 2026

BDA Apartments

ಸಿಎಂ ನಿವಾಸಕ್ಕೆ ಮುತ್ತಿಗೆಗೆ ಮುಂದಾದ ಬಿಜೆಪಿ ನಾಯಕರು ಪೊಲೀಸರ ವಶಕ್ಕೆ BDA JK_Adv...
Home Front Page ಸಿಎಂ ನಿವಾಸಕ್ಕೆ ಮುತ್ತಿಗೆಗೆ ಮುಂದಾದ ಬಿಜೆಪಿ ನಾಯಕರು ಪೊಲೀಸರ ವಶಕ್ಕೆ

ಸಿಎಂ ನಿವಾಸಕ್ಕೆ ಮುತ್ತಿಗೆಗೆ ಮುಂದಾದ ಬಿಜೆಪಿ ನಾಯಕರು ಪೊಲೀಸರ ವಶಕ್ಕೆ

ಬೆಂಗಳೂರು,ಜೂನ್,17,2025 (www.justkannada.in):  ಕಾಲ್ತುಳಿತ ಪ್ರಕರಣದಲ್ಲಿ 11 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಿಎಂ ನಿವಾಸಕ್ಕೆ ಮುತ್ತಿಗೆಗೆ ತೆರಳುತ್ತಿದ್ದ ಬಿಜೆಪಿ ನಾಯಕರನ್ನ ಪೊಲೀಸರು ವಶಕ್ಕೆ ಪಡೆದರು.

ಪ್ರಕರಣಕ್ಕೆ ಸಂಬಂಧಿಸಿದಂತೆ  ಸಿಎಂ, ಡಿಸಿಎಂ  ರಾಜೀನಾಮೆಗೆ  ಆಗ್ರಹಿಸಿ ಫ್ರೀಡಂಪಾರ್ಕ್ ನಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿತು. ಬಿಜೆಪಿ ರಾಜ್ಯಾಧ್ಯಕ್ಷ  ಬಿವೈ ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದರಾದ ಗೋವಿಂದ ಕಾರಜೋಳ,  ಪಿಸಿ ಮೋಹನ್,  ಶಾಸಕರಾದ ಕೆ.ಗೋಪಾಲಯ್ಯ ಸಿಮೇಂಟ್ ಮಂಜುನಾಥ್,  ಭೈರತಿ ಬಸವರಾಜು ಮುನಿರತ್ನ. ಎಂಎಲ್ ಸಿ ರವಿಕುಮಾರ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಈ ಮಧ್ಯೆ ಸಿಎಂ ನಿವಾಸಕ್ಕೆ ಮುತ್ತಿಗೆಗೆ ಮುಂದಾಗಿದ್ದ  ಬಿಜೆಪಿ ನಾಯಕರನ್ನು ಪೊಲೀಸರು ಫ್ರೀಡಂ ಪಾರ್ಕ್ ಬಳಿಯೇ ವಶಕ್ಕೆ ಪಡೆದಿದ್ದು  ಉಪ್ಪಾರಪೇಟೆ ಠಾಣೆಗೆ ಕರೆದೊಯ್ದರು.vtu

Key words: BJP leaders, Protest, CM,  residence , police