Tuesday, September 29, 2026

BDA Apartments

ಶಾಸಕ ಬಿ.ಆರ್ ಪಾಟೀಲ್ ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ಅಸಮಾಧಾನ BDA JK_Adv BDA Adv
Home Front Page ಶಾಸಕ ಬಿ.ಆರ್ ಪಾಟೀಲ್ ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ಅಸಮಾಧಾನ

ಶಾಸಕ ಬಿ.ಆರ್ ಪಾಟೀಲ್ ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ಅಸಮಾಧಾನ

ಬೆಂಗಳೂರು, ಜೂನ್ 21,2025 (www.justkannada.in):  ವಸತಿ ಯೋಜನೆಯ ಮನೆ ಹಂಚಿಕೆಗೆ ಹಣಪಡೆಯುತ್ತಿದ್ದಾರೆ ಎಂಬ ಕಾಂಗ್ರೆಸ್ ಶಾಸಕ ಬಿ.ಆರ್ ಪಾಟೀಲ್ ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್ , ಶಾಸಕ ಬಿ.ಆರ್.ಪಾಟೀಲ್ ಅವರ ಹೇಳಿಕೆಯನ್ನು ಖಂಡಿಸುತ್ತಿದ್ದೇನೆ, ಮುಖ್ಯಮಂತ್ರಿ ಅವರಿಗೆ ಈ ವಿಚಾರವಾಗಿ ಸೂಕ್ತ ತಿಳುವಳಿಕೆ ನೀಡುವುದಾಗಿ ತಿಳಿಸಿದ್ದಾರೆ.

ಬಿ.ಆರ್.ಪಾಟೀಲ್ ಯಾವ ಹಂತದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಆದರೆ ಆ ರೀತಿ ಯಾವುದೇ ಭ್ರಷ್ಟಾಚಾರ ನಡೆಯುತ್ತಿಲ್ಲ. ಮುಖ್ಯಮಂತ್ರಿ ಹಾಗೂ ನಾವು ಬಿ.ಆರ್.ಪಾಟೀಲ್ ಅವರಿಗೆ ಸ್ಪಷ್ಟವಾಗಿ ಈ ಬಗ್ಗೆ ಏನು ಹೇಳಬೇಕೋ ಅದನ್ನು ಹೇಳುತ್ತೇವೆ . ಈ ಹೇಳಿಕೆ ಮತ್ತು ನಡವಳಿಕೆ ಮುಖ್ಯಮಂತ್ರಿಯವರ ಗಮನಕ್ಕೆ ಬಂದಿದೆ. ಅದಕ್ಕೆ ಏನು ಕ್ರಮ ಕೈಗೊಳ್ಳಬೇಕೋ ಅದನ್ನು ಮುಖ್ಯಮಂತ್ರಿಗಳು ತೆಗೆದುಕೊಳ್ಳುತ್ತಾರೆ ಎಂದರು.

ವಸತಿ ಯೋಜನೆಯ ಫಲಾನುಭವಿಗಳ ಆಯ್ಕೆ ಪಾರದರ್ಶಕವಾಗಿ ನಡೆಯುತ್ತಿದೆ. ಗ್ರಾ.ಪಂ. ಅರ್ಹ ಫಲಾನುಭವಿಯನ್ನು ಆಯ್ಕೆ ಮಾಡುತ್ತದೆ. 1.50 ಲಕ್ಷ ರೂ. ಅನುದಾನ ನೀಡುವುದಕ್ಕೆ ಯಾವ ಮಂತ್ರಿ ಲಂಚ ಕೇಳಲು ಸಾಧ್ಯ? ಎಂದು  ಡಿಸಿಎಂ ಡಿಕೆ ಶಿವಕುಮಾರ್ ಪ್ರಶ್ನಿಸಿದರು.vtu

Key words: DCM, DK Shivakumar, MLA B.R Patil, statement