ಮೈಸೂರು,ಜೂನ್,21,2025 (www.justkannada.in): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಯುಜಿಸಿ-ನೆಟ್ ಮತ್ತು ಕೆ-ಸೆಟ್ ಪರೀಕ್ಷೆಗಳಿಗೆ ತರಬೇತಿ ನೀಡಲಾಗುತ್ತಿದೆ.
ಕರ್ನಾಟಕ ಸರ್ಕಾರವು ಕೆಇಎ(ಕರ್ನಾಟಕ ಪರೀಕ್ಷಾ ಪ್ರಾಧಿಕಾರ) ಮೂಲಕ ನಡೆಸಲಿರುವ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆ-ಸೆಟ್) ಹಾಗೂ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ರಾಷ್ಟ್ರಮಟ್ಟದ ಕಾಲೇಜು ಸಹಾಯಕ ಪ್ರಾಧ್ಯಾಪಕರ (ಯುಜಿಸಿ-ನೆಟ್) ಮತ್ತು ಕಿರಿಯ ಶಿಷ್ಯ ವೇತನ ಸಂಶೋಧನ ಸಹಾಯಕರ (ಜೆಆರ್ಎಫ್) ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಛೇರಿಯಲ್ಲಿ ನೀಡಲು ನಿರ್ಧರಿಸಲಾಗಿದೆ.
ಆಸಕ್ತರು ದಿನಾಂಕ: 30.06.2025 ರೊಳಗಾಗಿ ಬೆಳಗ್ಗೆ 10.00 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದೆಂದು ಕರಾಮುವಿ ಕುಲಸಚಿವ ಪ್ರೊ. ನವೀನ್ಕುಮಾರ್ ಎಸ್.ಕೆ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Key words: Coaching, UGC-NET, K-SET, exams, KSOU