Thursday, August 13, 2026

BDA Apartments

Home Front Page ಭಾರೀ ಮಳೆ: ಕೆಆರ್ ಎಸ್ ಜಲಾಶಯ ಭರ್ತಿಗೆ ಇನ್ನು 4 ಅಡಿ ಮಾತ್ರ ಬಾಕಿ

ಭಾರೀ ಮಳೆ: ಕೆಆರ್ ಎಸ್ ಜಲಾಶಯ ಭರ್ತಿಗೆ ಇನ್ನು 4 ಅಡಿ ಮಾತ್ರ ಬಾಕಿ

ಮಂಡ್ಯ,ಜೂನ್,23,2025 (www.justkannada.in): ರಾಜ್ಯದಲ್ಲಿ ಮುಂಗಾರು ಮಳೆ ಉತ್ತಮವಾಗಿ ಆಗುತ್ತಿದ್ದು ಜಲಾಶಯಗಳಿಗೆ ನೀರು ಹರಿದು ಬರುತ್ತಿದೆ. ಈ ಮಧ್ಯೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೆಆರ್ ಎಸ್ ಜಲಾಶಯಕ್ಕೆ ಭಾರಿ ಪ್ರಮಾಣದ ನೀರು ಹರಿದು ಬರುತ್ತಿದೆ.

ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ 124 ಅಡಿಯಿರವ ಕೆಆರ್ ಎಸ್ ಜಲಾಶಯ ಈಗಾಗಲೇ 120 ಅಡಿ ಭರ್ತಿಯಾಗಿದೆ. ಪೂರ್ತಿ ಭರ್ತಿಯಾಗಲು ಇನ್ನು ನಾಲ್ಕು ಅಡಿ ಮಾತ್ರ ಬಾಕಿ ಇದೆ. ಇದು ಕೂಡ ಒಂದು ವಾರದಲ್ಲಿ ಭರ್ತಿಯಾಗುವ ಸಾಧ್ಯತೆ ಇದ್ದು ಈ ಮೂಲಕ ಇದೇ ಮೊದಲ ಬಾರಿಗೆ ಕೆಆರ್ ಎಸ್ ಜಲಾಶಯ ಜೂನ್ ತಿಂಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಭರ್ತಿಯಾದಂತಾಗುತ್ತದೆ. ಕೆಆರ್ ಎಸ್ ಜಲಾಶಯದ ನೀರಿನ ಸಂಗ್ರಹ ಮಟ್ಟ 43 ಟಿಎಂಸಿ ಆಗಿದೆ.

ಇನ್ನು ಇಂದು 4 ಜಿಲ್ಲಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ  ಕೊಡಗು, ಕೋಲಾರ, ಬಳ್ಳಾರಿ, ದಕ್ಷಿಣ ಕನ್ನಡದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಯಲ್ಲೋ ಅಲರ್ಟ್ ಘೋಷಿಸಲಾಗಿದೆ.vtu

Key words: Heavy rains,  4 feet, fill,  KRS reservoir