Friday, October 2, 2026

BDA Apartments

You should utilize any platform that you get to learn: Nagathihalli Chandrashekar BDA JK_Adv BDA Adv
Home Front Page ಬೆಂಗಳೂರು, ಶಿವಮೊಗ್ಗ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ, ಪರಿಶೀಲನೆ

ಬೆಂಗಳೂರು, ಶಿವಮೊಗ್ಗ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ, ಪರಿಶೀಲನೆ

ಬೆಂಗಳೂರು, ಜೂನ್, 24,2025 (www.justkannada.in):  ಬೆಂಗಳೂರು, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಅಧಿಕಾರಿಗಳ ಕಚೇರಿ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲನೆ ನಡೆಸಿದ್ದಾರೆ.

ಶಿವಮೊಗ್ಗದ ಅರ್ಗ್ಯಾನಿಕ್ ಫಾರ್ಮಿಂಗ್ ಸಹಾಯಕ ನಿರ್ದೇಶಕ ಪ್ರದೀಪ್, ಆನೇಕಲ್ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕೆ.ಜಿ.ಅಮರನಾಥ್, ಗದಗದ ಪಟ್ಟಣ ಪೊಲೀಸ್ ನಿರೀಕ್ಷಕ ಧ್ರುವರಾಜ್​, ಧಾರವಾಡ ಮಲಪ್ರಭಾ ಯೋಜನೆ ಇಂಜಿನಿಯರ್ ಅಶೋಕ್ ವಾಲ್ಸಂದ್, ಚಿಕ್ಕಮಗಳೂರು ನಗರಸಭೆ ಅಧಿಕಾರಿ ಲತಾಮಣಿ ಮನೆ ಮೇಲೆ ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದು ದಾಖಲೆ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಕಲಬುರಗಿ ಪಿಆರ್​ಇ ವಿಭಾಗದ ಇಇ ಮಲ್ಲಿಕಾರ್ಜುನ ಅಲಿಪುರ, ಸಣ್ಣೂರು ಗ್ರಾ.ಪಂ. ಪಿಡಿಒ ರಾಮಚಂದ್ರ ಮನೆ ಮೇಲೆಯೂ ಲೋಕಾಯುಕ್ತ ಅಧಿಕಾರಿಗಳು, ಸಿಬ್ಬಂದಿ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರಿನಲ್ಲಿಯೂ ಲೋಕಾಯಕ್ತ ದಾಳಿ ನಡೆದಿದೆ.vtu

Key words: Lokayukta, raids, Bengaluru, Shivamogga