Friday, October 16, 2026

Dasara Wishes

ಮಾವಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹ: ಇಂದು ಕೋಲಾರ ಬಂದ್ DasraWishes_JK DasraWishes JK
Happy Dasara
Home Front Page ಜೂ.29ಕ್ಕೆ ಪತ್ರಕರ್ತರ ಸಂಘದಿಂದ  ಶ್ರೀ ಶಿವರಾತ್ರೀಶ್ವರ ಮಾಧ್ಯಮ ಪ್ರಶಸ್ತಿ ಪ್ರದಾನ ಸಮಾರಂಭ.

ಜೂ.29ಕ್ಕೆ ಪತ್ರಕರ್ತರ ಸಂಘದಿಂದ  ಶ್ರೀ ಶಿವರಾತ್ರೀಶ್ವರ ಮಾಧ್ಯಮ ಪ್ರಶಸ್ತಿ ಪ್ರದಾನ ಸಮಾರಂಭ.

Mysore District Journalists' Association organized a felicitation ceremony on June 29 to present this year's prestigious Shri Shivaratrishwara Media Award, award the Pratibha Puraskar to 30 children of journalists, and felicitation ceremony to journalists who received various awards

vtu

ಮೈಸೂರು, ಜೂ.೨೫, ೨೦೨೫:  ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಈ ಸಾಲಿನ ಪ್ರತಿಷ್ಠಿತ ಶ್ರೀ ಶಿವರಾತ್ರೀಶ್ವರ ಮಾಧ್ಯಮ ಪ್ರಶಸ್ತಿ ಪ್ರದಾನ, ಪತ್ರಕರ್ತರ 30 ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮತ್ತು ವಿವಿಧ ಪ್ರಶಸ್ತಿಗೆ ಭಾಜನರಾದ ಪತ್ರಕರ್ತರಿಗೆ ಅಭಿನಂದನಾ ಸಮಾರಂಭವನ್ನು ಜೂನ್ 29 ರಂದು ಅಯೋಜಿಸಲಾಗಿದೆ.

ನಗರದ ಶ್ರೀ ಶಿವರಾತ್ರಿ ರಾಜೇಂದ್ರ ಭವನದಲ್ಲಿ ಅಂದು ಬೆಳಗ್ಗೆ 10.30ಕ್ಕೆ ಸಮಾರಂಭ ನಡೆಯಲಿದೆ. ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ  ಕೆ.ವಿ. ಪ್ರಭಾಕರ್ ಉದ್ಘಾಟಿಸುವರು. ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನು ನಂಜನಗೂಡಿನ ಶಾಸಕ ದರ್ಶನ್ ಧ್ರುವನಾರಾಯಣ್ ವಿತರಣೆ ಮಾಡಲಿದ್ದಾರೆ.

ಈ ಸಾಲಿನ ಶ್ರೀ ಶಿವರಾತ್ರೀಶ್ವರ ಮಾಧ್ಯಮ ಪ್ರಶಸ್ತಿಗೆ “ಮೈಸೂರು ಮಿತ್ರ “ ಪತ್ರಿಕೆಯ ಹಿರಿಯ ಉಪ ಸಂಪಾದಕ ಎ.ಸಿ. ಪ್ರಭಾಕರ್ ಆಯ್ಕೆಯಾಗಿದ್ದು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಪ್ರಶಸ್ತಿ ಪ್ರದಾನ ಮಾಡುವರು. ಪ್ರಶಸ್ತಿ ಪುರಸ್ಕೃತರ ಬಗ್ಗೆ ನಿವೃತ್ತ ಡಿಜಿಪಿ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯಾಧ್ಯಕ್ಷ  ಶಂಕರ ಬಿದರಿ ಮಾತನಾಡಲಿದ್ದಾರೆ.

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜೆಎಸ್ಎಸ್ ಮಹಾವಿದ್ಯಾಲಯದ ಕಾರ್ಯನಿರ್ವಾಹಕ ಕಾರ್ಯದರ್ಶಿ ಶ್ರೀ ಸಿ.ಜೆ‌. ಬೆಟಸೂರ್ ಮಠ್, ಜಿಎಸ್ಎಸ್ ಸಮೂಹ ಸಂಸ್ಥೆಯ ಮುಖ್ಯಸ್ಥ ಶ್ರೀಹರಿ ದ್ವಾರಕನಾಥ್ ಭಾಗವಹಿಸಲಿದ್ದಾರೆ.

ಇದೇ ವೇಳ ವಿವಿಧ ಪ್ರಶಸ್ತಿಗಳಿಗೆ ಭಾಜನರಾದ ಪತ್ರಕರ್ತರಾದ ಕೂಡ್ಲಿ ಗುರುರಾಜ್, ಎಸ್.ಟಿ. ರವಿಕುಮಾರ್, ಎಂ.ಎಸ್. ಸತ್ಯನಾರಾಯಣ, ಆರ್.ಕೃಷ್ಣ, ಹೆಚ್.ಕೆ. ಚಂದ್ರು, ಎಂ.ಟಿ. ಯೋಗೀಶ್ ಕುಮಾರ್, ಪುನೀತ್ ಚಪ್ಪರದಹಳ್ಳಿ ಅವರನ್ನು ಅಭಿನಂದಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

key words:  Sri Shivaratrishwara Media Awards, ceremony, Mysore district journalists Association, MDJ

vtu

SUMMARY:

The Sri Shivaratrishwara Media Awards ceremony will be held by the Journalists Association on June 29th.

sri shivaratrishwara media k.v.prabhakar

Mysore District Journalists’ Association organized a felicitation ceremony on June 29 to present this year’s prestigious Shri Shivaratrishwara Media Award, award the Pratibha Puraskar to 30 children of journalists, and felicitation ceremony to journalists who received various awards.