Monday, October 12, 2026

Dasara Wishes

BJP DasraWishes_JK DasraWishes JK
Happy Dasara
Home Front Page ಆಷಾಢ ಶುಕ್ರವಾರ: ಮಹಾಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಾ ದರ್ಶನ ನೀಡಿದ ತಾಯಿ ಚಾಮುಂಡೇಶ್ವರಿ

ಆಷಾಢ ಶುಕ್ರವಾರ: ಮಹಾಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಾ ದರ್ಶನ ನೀಡಿದ ತಾಯಿ ಚಾಮುಂಡೇಶ್ವರಿ

ಮೈಸೂರು,ಜೂನ್, 27,2025 (www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಆಷಾಢ ಮಾಸದ ಸಂಭ್ರಮ, ಇಂದು ಮೊದಲ ಆಷಾಢ ಶುಕ್ರವಾರದಲ್ಲಿ ಹಿನ್ನೆಲೆಯಲ್ಲಿ ಭಕ್ತರು ಚಾಮುಂಡಿ ಬೆಟ್ಟಕ್ಕೆ ಲಗ್ಗೆಯಿಟ್ಟು ತಾಯಿ ಚಾಮುಂಡೇಶ್ವರಿ ದರ್ಶನ ಪಡೆಯುತ್ತಿದ್ದಾರೆ.

ತುಂತುರು ಮಳೆ ಹಿಮದ ನಡುವೆ ಚಾಮುಂಡಿ ಬೆಟ್ಟದಲ್ಲಿ ಹೂವೂಗಳು ತಳಿರು ತೋರಣ, ದೀಪಾಲಂಕಾರ ಭಕ್ತರನ್ನ ಸ್ವಾಗತಿಸುತ್ತಿದ್ದು, ನಾಡ ಅಧಿದೇವಿ ಚಾಮುಂಡೇಶ್ವರಿ ತಾಯಿಗೆ ಮುಂಜಾನೆ ತಾಯಿಗೆ ಪಂಚಾಮೃತ ಅಭಿಷೇಕ, ಅರ್ಚನೆ ಮಾಡಲಾಯಿತು. ತಾಯಿ ಚಾಮುಂಡೇಶ್ವರಿ ಹೂವಿನ ನಡುವೆ ಮಹಾಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಾ ಭಕ್ತರಿಗೆ ದರ್ಶನ ನೀಡಿದ್ದು, ಕಳೆದ ಬಾರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಹಿನ್ನಲೆ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

ಪ್ರತಿ ವರ್ಷದಂತೆ ಈ ಬಾರಿಯೂ ಖಾಸಗಿ ವಾಹನಗಳ ಪ್ರವೇಶ ನಿರ್ಭಂಧಿಸಲಾಗಿದ್ದು ಕೆ.ಎಸ್.ಆರ್.ಟಿ.ಸಿ ವತಿಯಿಂದ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ಲಲಿತಮಹಲ್ ಪ್ಯಾಲೇಸ್ ಆವರಣದಿಂದ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ.

ಭಕ್ತರಿಗೆ ನಾಡದೇವಿಯ ದರ್ಶನ ಪಡೆಯಲು ಜಿಲ್ಲಾಡಳಿತದ ವತಿಯಿಂದ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ. ಭಕ್ತರ ಅನುಕೂಲಕ್ಕಾಗಿ 300ರೂ , 2 ಸಾವಿರ ಟಿಕೆಟ್ ವ್ಯವಸ್ಥೆ ಮಾಡಲಾಗಿದೆ. 2000 ಟಿಕೆಟ್ ಪಡೆದವರಿಗೆ ಲಲಿತ ಮಹಲ್ ನಿಂದ ಬೆಟ್ಟಕ್ಕೆ ಎಸಿ ಬಸ್  ನಲ್ಲಿ   ಕರೆದುಕೊಂಡು ಹೋಗಿ ಬೆಟ್ಟದಲ್ಲಿ ನೇರವಾಗಿ ದರ್ಶನ ಮಾಡಿ ನಂತರ ಪ್ರಸಾದ ರೂಪದಲ್ಲಿ ಚಾಮುಂಡೇಶ್ವರಿ ವಿಗ್ರಹ, ಲಾಡು, ಕುಡಿಯುವ ನೀರಿನ ಬಾಟಲ್ ,ಒಂದು ಬ್ಯಾಗ್ ವಿತರಿಸಲಾಗುತ್ತಿದೆ.vtu

Key words: Ashada Friday, Chamundi hills, devotees