Tuesday, September 29, 2026

BDA Apartments

ಐದು ಹುಲಿಗಳ ಸಾವು ಕರ್ನಾಟಕ ರಾಜ್ಯಕ್ಕೆ ಕಪ್ಪುಚುಕ್ಕೆ- ಕೇಂದ್ರ ಸಚಿವ HDK BDA JK_Adv BDA...
Home Front Page ಐದು ಹುಲಿಗಳ ಸಾವು ಕರ್ನಾಟಕ ರಾಜ್ಯಕ್ಕೆ ಕಪ್ಪುಚುಕ್ಕೆ- ಕೇಂದ್ರ ಸಚಿವ HDK

ಐದು ಹುಲಿಗಳ ಸಾವು ಕರ್ನಾಟಕ ರಾಜ್ಯಕ್ಕೆ ಕಪ್ಪುಚುಕ್ಕೆ- ಕೇಂದ್ರ ಸಚಿವ HDK

ಬೆಂಗಳೂರು,ಜೂನ್,27,2025 (www.justkannada.in):  ಮಲೆಮಹದೇಶ್ವರ ಬೆಟ್ಟದ ಮೀಣ್ಯಂ ಅರಣ್ಯ ಪ್ರದೇಶದಲ್ಲಿ ಐದು ಹುಲಿಗಳು ಸಾವನ್ನಪ್ಪಿರುವುದು ಕರ್ನಾಟಕ ರಾಜ್ಯಕ್ಕೆ ಕಪ್ಪುಚುಕ್ಕೆಯಾಗಿದೆ ಎಂದು – ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಟೀಕಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ಮೀಣ್ಯಂ ಅರಣ್ಯ ಪ್ರದೇಶದಲ್ಲಿ ಹುಲಿ ಮರಿಗಳು ಯಾವ ಕಾರಣಕ್ಕೆ  ಸತ್ತಿರೋದು ಮಾಹಿತಿ ಇಲ್ಲ. ಈ ಸಂಬಂಧ  ತನಿಖಾ ವರದಿ ಬಂದ ಮೇಲೆ ಚರ್ಚೆ ಮಾಡೋಣ ಎಂದರು.

ಸೆಪ್ಟಂಬರ್ ಬಳಿಕ ರಾಜ್ಯ ರಾಜಕಾರಣದಲ್ಲಿ ಭಾರೀ ಬದಲಾವಣೆ ಎಂಬ ಸಚಿವ ಕೆ.ಎನ್ ರಾಜಣ್ಣ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಹೆಚ್.ಡಿ ಕುಮಾರಸ್ವಾಮಿ,  ಕಾಂಗ್ರೆಸ್ ನಲ್ಲಿ ನಡೆಯುತ್ತಿರುವುದು ಕ್ರಾಂತಿಯೋ ಯಾವುದೇ ಗೊತ್ತಿಲ್ಲ. ಇದನ್ನ ರಾಜಣ್ಣ ಅವರೇ ಹೇಳಬೇಕು. ಕಾಂಗ್ರೆಸ್ ಪಕ್ಷದ ಬೆಳವಣಿಗೆ ನನಗೆ ಹೇಗೆ ಗೊತ್ತಾಗುತ್ತೆ ಎಂದು ಪ್ರಶ್ನಿಸಿದರು.vtu

Key words: Death, five tigers, black mark, Karnataka, Union Minister, HDK