Friday, October 9, 2026

BDA Apartments

Increase in COVID cases: DC’s village stay program with held BDA JK_Adv BDA Adv
Home Crime ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋಗಿ ಬರುತ್ತಿದ್ದಾಗ ಅಪಘಾತ: ರಾಜ್ಯದ ಮೂವರು ಸಾವು

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋಗಿ ಬರುತ್ತಿದ್ದಾಗ ಅಪಘಾತ: ರಾಜ್ಯದ ಮೂವರು ಸಾವು

ಚಿತ್ತೂರು,ಜೂನ್,30,2025 (www.justkannada.in): ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋಗಿ ಬರುತ್ತಿದ್ದಾಗ ಅಪಘಾತ ಟಿಟಿ ವಾಹನ ಮತ್ತು ವ್ಯಾನ್ ನಡುವೆ ಡಿಕ್ಕಿ ಸಂಭವಿಸಿ ಕರ್ನಾಟಕದ ಮೂವರು ಸಾವನ್ನಪ್ಪಿರುವ ಘಟನೆ ಚಿತ್ತೂರು ಜಿಲ್ಲೆಯ ಮದನಪಲ್ಲಿ ಬಳಿ ನಡೆದಿದೆ.

ತಿಮ್ಮಪ್ಪನ ದರ್ಶನಕ್ಕೆ ಹೋಗಿ ಹಿಂದಿರುಗುತ್ತಿದ್ದಾಗ ಆಂಧ್ರದ ಚಿತ್ತೂರು ಜಿಲ್ಲೆಯ ಮದನಪಲ್ಲಿ ಬಳಿ ಭೀಕರ ಟಿಟಿ ವಾಹನ ಅಪಘಾತ ಸಂಭವಿಸಿರುವ ಘಟನೆ ನಡೆದಿದೆ. ಪರಿಣಾಮ ಕರ್ನಾಟಕದ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಮೇಘರ್ಷ(17), ಚರಣ್(17) ಮತ್ತು ಶ್ರಾವಣಿ ಮೃತರು. ಮೃತರನ್ನು ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಹೊಸಹುಡ್ಯಾ ಗ್ರಾಮದವರು ಎಂದು ಗುರುತಿಸಲಾಗಿದೆ. 8 ಜನರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಟಿಟಿ ವಾಹನವೊಂದು ವ್ಯಾನ್ಗೆ ಡಿಕ್ಕಿ ಹೊಡೆದ ಪರಿಣಾಮ  ಈದುರ್ಘಟನೆ ಸಂಭವಿಸಿದೆ. ಮೃತರು ಚಿಕ್ಕಬಳ್ಳಾಪುರ ಮೂಲದ ಬಾಗೇಪಲ್ಲಿಯವರಾಗಿದ್ದು, ತಮ್ಮ ನಿವಾಸಕ್ಕೆ ಹಿಂದಿರುಗುತ್ತಿದ್ದರು. ಅವರು ಪ್ರಯಾಣಿಸುತ್ತಿದ್ದ ಟಿಟಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ.vtu

Key words: Accident, Three people, state, die