ಮೈಸೂರು, ಜೂನ್ 30: ನಾನು ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಬ್ಬರೂ ಒಟ್ಟಾಗಿದ್ದೇವೆ, ಯಾರೂ ಏನೂ ಹೇಳಿದರು ನಮ್ಮ ಮಧ್ಯೆ ಭಿನ್ನಾಭಿಪ್ರಾಯವಿಲ್ಲ. ಸರ್ಕಾರ ಐದು ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
ಮೈಸೂರು ವಿಮಾನನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಹೇಳಿದಿಷ್ಟು..
ಸದ್ಯದಲ್ಲೇ ರಾಜ್ಯ ಕಾರಣದಲ್ಲಿ ಕ್ರಾಂತಿಯಾಗಲಿದೆ ಎಂಬ ಹೇಳಿಕೆ ಹಾಗೂ ಮುಖ್ಯಮಂತ್ರಿ ಬದಲಾಗುತ್ತಾರೆ ಎಂಬ ಹೇಳಿಕೆ ಬಗ್ಗೆ ಪ್ರಶ್ನಿಸಿದಾಗ ಈ ಮೇಲಿನಂತೆ ಉತ್ತರಿಸಿದರು. ಸರಕಾರ ಐದು ವರ್ಷ ಸುಭದ್ರವಾಗಿರುತ್ತದೆ, ಅದು “ಬಂಡೆ”ಯಂತೆ ಎಂದು ಪಕ್ಕದಲ್ಲೇ ಇದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಕೈ ಹಿಡಿದು ಮೇಲೆತ್ತಿ ನುಡಿದರು.
ಸುರ್ಜೆವಾಲಾ ಅಭಿಪ್ರಾಯ ಪಡೆಯಲಿದ್ದಾರೆ
ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕಾರ್ಯದರ್ಶಿ ಸುರ್ಜೆವಾಲಾ ಅವರು ರಾಜ್ಯಕ್ಕೆ ಭೇಟಿ ನೀಡುತ್ತಿರುವ ಬಗ್ಗೆ ಮಾತನಾಡಿ ಅವರು ಅಭಿಪ್ರಾಯ ಕೇಳಿ, ಅವರ ಕೆಲಸವನ್ನು ಮಾಡುತ್ತಾರೆ ಎಂದರು.
ಬಿಜೆಪಿ ಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು
ಸಿದ್ದರಾಮಯ್ಯ ಅವರು ಈ ಬಾರಿಯ ದಸರಾ ಉದ್ಘಾಟಿಸುವುದಿಲ್ಲ ಎಂದು ಬಿಜೆಪಿಯವರು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಶ್ರೀರಾಮುಲು ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದಾರೆ. ಅವರು ಹೇಗೆ ಭವಿಷ್ಯ ನುಡಿಯುತ್ತಾರೆ ಎಂದು ಪ್ರಶ್ನಿಸಿದರು.
key words: Deputy Chief Minister, D.K. Shivakumar, Chief Minister, Siddaramaiah, as strong as a rock, five years.
SUMMARY:
Deputy Chief Minister D.K. Shivakumar and I are together; there is no difference between us. Chief Minister Siddaramaiah expressed confidence that the government will be as strong as a rock for five years.