ನವದೆಹಲಿ,ಜುಲೈ,2,2025 (www.justkannada.in): ಕೋವಿಡ್ ಲಸಿಕೆಗೂ ಹೃದಯಾಘಾತಕ್ಕೂ ಯಾವುದೇ ಸಂಬಂಧವಿಲ್ಲ ಎಂದು ICMR, AIIMS ನಡೆಸಿದ ಅಧ್ಯಯನದಿಂದ ಬಹಿರಂಗವಾಗಿದೆ.
ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು ಇದು ಕೋವಿಡ್ ಲಸಿಕೆ ಎಫೆಕ್ಟ್ ಎಂದು ಹೇಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಕೋವಿಡ್ -19 ಲಸಿಕೆಗಳು ಮತ್ತು ಹೃದಯಾಘಾತದಿಂದ ಉಂಟಾಗುವ ಹಠಾತ್ ಸಾವುಗಳ ಹೆಚ್ಚಳದ ನಡುವೆ ಯಾವುದೇ ಸಂಬಂಧ ಕಂಡುಬಂದಿಲ್ಲ ಎಂದು ತಿಳಿಸಿದೆ.
ಕೋವಿಡ್ ನಂತರದ ವಯಸ್ಕರಲ್ಲಿ ಹಠಾತ್ ಸಾವುಗಳ ಬಗ್ಗೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮತ್ತು ಏಮ್ಸ್ ನಡೆಸಿದ ಅಧ್ಯಯನಗಳು ಕೋವಿಡ್ -19 ಲಸಿಕೆಗಳು ಮತ್ತು ಹಠಾತ್ ಸಾವುಗಳ ನಡುವೆ ಯಾವುದೇ ಸಂಬಂಧವನ್ನು ನಿರ್ಣಾಯಕವಾಗಿ ಸ್ಥಾಪಿಸಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ವಯಸ್ಕರಲ್ಲಿ ಹಠಾತ್ ಸಾವಿನ ಕುರಿತು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮತ್ತು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ನಡೆಸಿದ ವ್ಯಾಪಕ ಅಧ್ಯಯನಗಳ ಕುರಿತು ಸಚಿವಾಲಯವು ಈ ಹೇಳಿಕೆಯನ್ನು ಸಮರ್ಥಿಸಿಕೊಂಡಿದೆ.
ಐಸಿಎಂಆರ್ ಮತ್ತು ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಕಂಟ್ರೋಲ್ (ಎನ್ಸಿಡಿಸಿ) ನಡೆಸಿದ ಅಧ್ಯಯನಗಳು ಭಾರತದಲ್ಲಿ ಕೋವಿಡ್ -19 ಲಸಿಕೆಗಳು ಸುರಕ್ಷಿತ ಮತ್ತು ಪರಿಣಾಮಕಾರಿ ಎಂದು ದೃಢಪಡಿಸಿವೆ. ಕೋವಿಡ್ ವ್ಯಾಕ್ಸಿನ್ ನಿಂದ ಹಾರ್ಟ್ ಅಟ್ಯಾಕ್ ಆಗಲ್ಲ. ಕೋವಿಡ್ ಲಸಿಕೆ ಸುರಕ್ಷಿತ ಪರಿಣಾಮಕಾರಿಯಾಗಿದೆ ಹಠಾತ್ ಹೃದಯ ಸಾವುಗಳಿಗೆ ಜೀವನಶೈಲಿ ಕಾರಣ. ಆನುವಂಶಿಕತೆ, ಜೀವನಶೈಲಿ, ಸೇರಿದಂತೆ ವಿವಿಧ ಅಂಶಗಳಿಂದಾಗಿ ಹಠಾತ್ ಹೃದಯ ಸಾವುಗಳು ಸಂಭವಿಸಬಹುದು ಎಂದು ಹೇಳಿಕೆಯಲ್ಲಿ ಸ್ಪಷ್ಟಪಡಿಸಿದೆ.
Key words: no link ,between, Covid vaccine , heart attacks