ಚಿಕ್ಕಬಳ್ಳಾಪುರ,ಜುಲೈ 2,2025 (www.justkannada.in): ಇಂದು ಚಿಕ್ಕಬಳ್ಳಾಪುರ ಜಿಲ್ಲೆ ನಂದಿಬೆಟ್ಟದಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆದಿದ್ದು ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೆಸರು ಬದಲಾವಣೆ ಸೇರಿ ಹಲವು ನಿರ್ಣಯ ಕೈಗೊಳ್ಳಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಂದಿಗಿರಿಧಾಮದ ಮಯೂರ ಸಭಾಂಗಣದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಎಲ್ಲಾ ಸಚಿವರೂ ಭಾಗವಹಿಸಿದ್ದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನ ಬೆಂಗಳೂರು ಉತ್ತರ ಜಿಲ್ಲೆ ಎಂದು, ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದ ಹೆಸರನ್ನು ಭಾಗ್ಯನಗರ ಎಂದು ಮರುನಾಮಕರಣ ಮಾಡುವುದಕ್ಕೆ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.
ಸಭೆಯಲ್ಲಿ ಹಲವು ಮಹತ್ವದ ವಿಚಾರಗಳನ್ನು ಚರ್ಚಿಸಲಾಗಿದೆ. ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳ ಜೊತೆಗೆ ಚಿತ್ರದುರ್ಗ, ಶಿವಮೊಗ್ಗ, ವಿಜಯನಗರ, ಕೊಪ್ಪಳ, ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆಗಳ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚೆ ನಡೆಸಲಾಗಿದೆ. ಈಗಾಗಲೇ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲಾಗಿದೆ. ಮುಂದುವರೆದ ಭಾಗವಾಗಿ ನೆಲಮಂಗಲ, ದೊಡ್ಡಬಳ್ಳಾಪುರ, ದೇವನಹಳ್ಳಿ, ಹೊಸಕೋಟೆ ತಾಲ್ಲೂಕುಗಳನ್ನೊಳಗೊಂಡ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು ಮರು ನಾಮಕರಣ ಮಾಡಲು ಸಮ್ಮತಿಸಲಾಗಿದೆ.
Key words: Cabinet meeting, Chikkaballapur, name Change, Bengalore Rural, District