ಬೆಂಗಳೂರು,ಜುಲೈ,3,2025 (www.justkannada.in): ಬೆಳಗಾವಿಯ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ತಮ್ಮ ಮೇಲೆ ಕೈಎತ್ತಿದ್ದ ಹಿನ್ನೆಲೆಯಲ್ಲಿ ಮನನೊಂದು ಧಾರವಾಡ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಭರಮನಿ ಸ್ವಯಂ ನಿವೃತ್ತಿಗೆ ಮುಂದಾಗಿದ್ದು ಈ ಕುರಿತು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಈ ಸಂಬಂಧ ಸರ್ಕಾರಕ್ಕೆ ಪತ್ರ ಬರೆದಿರುವ ಎಎಸ್ ಪಿ ನಾರಾಯಣ ಭರಮನಿ, ಸಾವಿರಾರು ಜನರು ಸೇರಿದ್ದ ಸಭೆಯಲ್ಲಿ ಅವಮಾನ ಆಗಿದೆ. ಸಾರ್ವಜನಿಕ ಸಭೆಯಲ್ಲಿ ನಾನು ಮಾಡದ ತಪ್ಪಿಗೆ ನಾನು ಅವಮಾನಕ್ಕೊಳಗಾದೆ. ಸಾರ್ವಜನಿಕ ಸಭೆಯಲ್ಲಿ ನನ್ನ ಆತ್ಮಸ್ಥೈರ್ಯ ಕುಗ್ಗಿಸಿದ್ದಾರೆ. ಹೀಗಾಗಿ ಸ್ವಯಂ ನಿವೃತ್ತಿಗೆ ಮುಂದಾಗಿದ್ದೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಷಣ ಮಾಡುತ್ತಿದ್ದ ವೇಳೆ ಬಿಜೆಪಿ ಪ್ರತಿಭಟನೆ ನಡೆಸಿತ್ತು. ಈ ವೇಳೆ ಬಿಜೆಪಿ ಕಾರ್ಯಕರ್ತೆಯರು ನುಗ್ಗಿದ್ದರು. ತಕ್ಷಣವೇ ಸಿಎಂ ಸಿದ್ದರಾಮಯ್ಯ ಎಎಸ್ ಪಿ ನಾರಾಯಣ ಭರಮನಿ ಅವರನ್ನ ಕರೆದು ತರಾಟೆಗೆ ತೆಗೆದುಕೊಂಡಿದ್ದರು. ಅಲ್ಲದೆ ಕೈ ಮೇಲೆ ಎತ್ತಿದ್ದರು. ಇದೀಗ ನಾರಾಯಣ ಭರಮನಿ ರಾಜೀನಾಮೆಗೆ ಮುಂದಾಗಿದ್ದಾರೆ.
Key words: CM Siddaramaiah, Insulted, ASP, voluntary, retirement