5 ವರ್ಷ ನಾನೇ ಸಿಎಂ ಎಂಬ ಸಿದ್ದರಾಮಯ್ಯ ಹೇಳಿಕೆ ಸಮರ್ಥಿಸಿಕೊಂಡ ಡಿಕೆ ಸುರೇಶ್

ಬೆಂಗಳೂರು,ಜುಲೈ,3,2025 (www.justkannada.in): 5 ವರ್ಷ ನಾನೇ ಸಿಎಂ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿರುವ ಬಮೂಲ್ ಅಧ್ಯಕ್ಷ ಹಾಗೂ ಮಾಜಿ ಸಂಸದ ಡಿಕೆ ಸುರೇಶ್, ಸಿದ್ದರಾಮಯ್ಯ ಹೇಳಿರುವುದರಲ್ಲಿ ತಪ್ಪೇನಿದೆ…? ಎನ್ನುವ ಮೂಲಕ ಹೇಳಿಕೆ ಸಮರ್ಥಿಸಿಕೊಂಡಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಡಿ.ಕೆ ಸುರೇಶ್, ಸಿದ್ದರಾಮಯ್ಯ ಹೇಳಿದ್ದರಲ್ಲಿ ತಪ್ಪೇನಿದೆ. ಅವರು ಸಿಎಂ ಆಗಿದ್ದಾರೆ.  ಸಿಎಂ ಆಗಿ ಮುಂದುವರೆಯುತ್ತಾರೆ ಅಂದರೆ ತಪ್ಪೇನಿದೆ.  ಶಾಸಕಾಂಗ ಸಭೆಯಲ್ಲಿ ತೀರ್ಮಾನ ಆಗಿದೆ. ಹೈಕಮಾಂಡ್ ತೀರ್ಮಾನ ಮಾಡಿ ಅವರನ್ನ ಸಿಎಂ ಮಾಡಿದೆ. ಸಿದ್ದರಾಮಯ್ಯ ನೀಡಿರುವ ಹೇಳಿಕೆಯಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು

ಮೊದಲಿನಿಂದಲೂ ಡಿಕೆ ಶಿವಕುಮಾರ್ ಅದನ್ನೇ ಹೇಳುತ್ತಿದ್ದಾರೆ.  ಪಕ್ಷದ ನಿರ್ಧಾರಕ್ಕೆ ಬದ್ದನಾಗಿರುತ್ತೇನೆಂದು ಹಿಂದೆಯೇ ಹೇಳಿದ್ದಾರೆ.  ಈಗಲೂ ಡಿಕೆ ಶಿವಕುಮಾರ್ ಅದನ್ನೇ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದ ಆದೇಶ ವನ್ನ ಒಪ್ಪಲೇ ಬೇಕಾಗುತ್ತದೆ, ಇವತ್ತು ಭರವಸೆ ಇದೆ. ನಾಳೆಯೂ ಭರವಸೆ ಇದೆ ಎಂದು ಡಿಕೆ ಸುರೇಶ್ ತಿಳಿಸಿದರು.vtu

Key words: DK Suresh, defends, Siddaramaiah, statement