ಬಂಧನದ ಭೀತಿ: ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ MLC ಎನ್.ರವಿಕುಮಾರ್

ಬೆಂಗಳೂರು,ಜುಲೈ,4,2025 (www.justkannada.in):  ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ  ಬಗ್ಗೆ ಅವಹೇಳನಕಾರಿ ಪದ ಬಳಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬಿಜೆಪಿ ವಿಧಾನಪರಿಷತ್ ಸದಸ್ಯ ಎನ್ ರವಿಕುಮಾರ್ ಅವರಿಗೆ ಬಂಧನದ ಭೀತಿ ಎದುರಾಗಿದ್ದು ಈ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಸಿಎಸ್ ಶಾಲಿನಿ ರಜನೀಶ್ ಅವರ ಬಗ್ಗೆ ಎಂಎಲ್ ಸಿ  ರವಿಕುಮಾರ್  ಹೇಳಿಕೆಗೆ ಸಾಕಷ್ಟು ಆಕ್ರೋಶ ವ್ಯಕ್ತವಾಗಿದ್ದು ಬಂಧನ ಭೀತಿ ಎದುರಾದ ಹಿನ್ನೆಲೆಯಲ್ಲಿ  ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ತಮ್ಮ ಪರ ವಕೀಲ  ಸುಯೋಗ ಹೇರಳೆ ಮೂಲಕ ಅರ್ಜಿ ಸಲ್ಲಿಸಿದ್ದಾರೆ.

ಮನವಿಯೊಂದನ್ನ ಸಲ್ಲಿಸಿಲು ಸಿಎಸ್ ಶಾಲಿನಿ ರಜನೀಶ್ ಭೇಟಿ ಮಾಡಲು ಬಿಜೆಪಿ ನಿಯೋಗ ತೆರಳಿತ್ತು.  ಈ ವೇಳೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಇರಲಿಲ್ಲಈ ಸಂದರ್ಭದಲ್ಲಿ  ಶಾಲಿನಿ ರಜನೀಶ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರು ಎಂಬ ಆರೋಪವಿದ್ದು ಎಫ್ ಐಆರ್ ದಾಖಲಾಗಿದೆ.vtu

Key words: MLC, N. Ravikumar, files, anticipatory bail, application, Court