ಮಾನವೀಯತೆ ಮೆರೆದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ,ಜುಲೈ ,8, 2025 (www.justkannada.in): ನಿಯಂತ್ರಣ ತಪ್ಪಿ ರಸ್ತೆಮಧ್ಯದಲ್ಲಿ ಬಿದ್ದು ಗಾಯಗೊಂಡಿದ್ದ ಬೈಕ್ ಸವಾರನನ್ನು ಆಸ್ಪತ್ರೆಗೆ ದಾಖಲಿಸಲು ನೆರವಾಗುವ ಮೂಲಕ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾನವೀಯತೆ ಮೆರೆದಿದ್ದಾರೆ.

ನಗರದ ಕುಮಾರ್ ಪಾರ್ಕ್ ಬಳಿ ನಿನ್ನೆ ಸಂಜೆ ಬೈಕ್ ಸವಾರನೊಬ್ಬ ನಿಯಂತ್ರಣ ತಪ್ಪಿ ರಸ್ತೆ ಮಧ್ಯದಲ್ಲೇ ಬಿದ್ದು ಗಾಯಗೊಂಡು ನರಳಾಡುತ್ತಿದ್ದರು. ದೆಹಲಿಗೆ ತೆರಳಲು ವಿಮಾನ ನಿಲ್ದಾಣಕ್ಕೆ ಹೊರಟಿದ್ದ  ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಇದನ್ನು ಗಮನಿಸಿ ತಕ್ಷಣ ತಮ್ಮ ವಾಹನದಿಂದ ಕೆಳಗಿಳಿದು ಗಾಯಾಳುವನ್ನು ತಮ್ಮ ಬೆಂಗಾವಲು ವಾಹನದಲ್ಲೇ ಕಿಮ್ಸ್ ಆಸ್ಪತ್ರೆಗೆ  ದಾಖಲಿಸಲು ನೆರವಾಗಿ ಮಾನವೀಯತೆ ಮೆರೆದರು.

ಸ್ವತಃ ಸಚಿವ ಪ್ರಹ್ಲಾದ್ ಜೋಶಿಯವರೇ ಗಾಯಾಳುಗಳನ್ನು ಅಪಘಾತದ ಸ್ಥಳದಿಂದ ಮೇಲೆತ್ತಲು ಕೈಜೋಡಿಸಿದ್ದಲ್ಲದೆ, ಗಾಯಾಳುವಿಗೆ ಧೈರ್ಯ ತುಂಬುವ ಕೆಲಸ ಸಹ ಮಾಡಿದರು. ಬಳಿಕ ಗಾಯಾಳುವಿಗೆ ಯಾವುದೇ ಸಮಸ್ಯೆ ಆಗದಂತೆ ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯಕೀಯ ಸಿಬ್ಬಂದಿಗೆ ಸೂಚನೆ ನೀಡಿದರು. ಸ್ಥಳದಲ್ಲಿದ್ದ ಜನರು ಸಚಿವರ ಸಮಯ ಪ್ರಜ್ಞೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಲ್ಲದೆ, ಅವರ ಕಾರ್ಯವನ್ನು ಶ್ಲಾಘಿಸಿದ್ದಾರೆ.vtu

Key words: Bike rider , injured, Union Minister, Prahlad Joshi, humanity