ಜನೌಷಧ ಕೇಂದ್ರಗಳ ಸ್ಥಗಿತ ಆದೇಶಕ್ಕೆ ತಡೆ ನೀಡಿದ ಹೈಕೋರ್ಟ್

ಬೆಂಗಳೂರು, ಜುಲೈ, 8,2025 (www.justkannada.in):  ರಾಜ್ಯದಲ್ಲಿ  ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿನ ಜನೌಷಧ ಕೇಂದ್ರಗಳನ್ನು ಸ್ಥಗಿತಗೊಳಿಸುವಂತೆ ರಾಜ್ಯ ಸರಕಾರ ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ ನೀಡಿ ಮಧ್ಯಂತರ ಆದೇಶ ಹೊರಡಿಸಿದೆ.

ಈ ಮೂಲಕ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ.  ಸರ್ಕಾರಿ ಆಸ್ಪತ್ರೆ ಆವರಣದಲ್ಲಿನ ಜನೌಷಧ ಕೇಂದ್ರಗಳನ್ನು ಸ್ಥಗಿತಗೊಳಿಸಿದ್ದ ಸರ್ಕಾರದ ಕ್ರಮ ಪ್ರಶ್ನಿಸಿ 16 ಜನರು ಹೈಕೋರ್ಟ್​ ಮೆಟ್ಟಿಲೇರಿದ್ದರು.

ಈ ಅರ್ಜಿಗಳ  ವಿಚಾರಣೆ ನಡೆಸಿದ ಹೈಕೋರ್ಟ್  ನ್ಯಾಯಮೂರ್ತಿ ಎಂ.ಐ.ಅರುಣ್ ಅವರಿದ್ದ  ಪೀಠ, ಮುಂದಿನ ವಿಚಾರಣೆವರೆಗೂ ಅರ್ಜಿದಾರರ ಜನೌಷಧ ಕೇಂದ್ರ ಸ್ಥಗಿತ ಬೇಡ ಎಂದು ಸೂಚನೆ ನೀಡಿದೆ.

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲರು,  ಜನೌಷಧ ಕೇಂದ್ರ ತೆರೆಯಲು ಮೂಲಸೌಕರ್ಯ ಕಲ್ಪಿಸಲು ವೆಚ್ಚವಾಗಿದೆ. ಜನರಿಗೆ ಶೇ.50ರಿಂದ ಶೇ.90ರ ರಿಯಾಯಿತಿ ದರದಲ್ಲಿ ಔಷಧ ನೀಡಲಾಗುತ್ತಿದೆ. ಸರ್ಕಾರದ ಆದೇಶದಿಂದ ತಮ್ಮ ಮೂಲಭೂತ ಹಕ್ಕಿಗೆ ಧಕ್ಕೆ ಎಂದು ತಿಳಿಸಿದರು.

ಈ ವಾದ ಆಲಿಸಿದ ಹೈಕೋರ್ಟ್, ಮುಂದಿನ ವಿಚಾರಣೆವರೆಗೆ ಅರ್ಜಿದಾರರ ಜನೌಷಧ ಕೇಂದ್ರ ಸ್ಥಗಿತಗೊಳಿಸದಂತೆ ಮಧ್ಯಂತರ ಆದೇಶ ನೀಡಿದೆ.vtu

Key words: High Court, stays, order ,close, Janaushadha Centre