ನವದೆಹಲಿ,ಜುಲೈ,9,2025 (www.justkannada.in): ಮಹದಾಯಿ ಯೋಜನೆಗೆ ಗೋವಾ ತಕರಾರು ಹಾಕಿದೆ. ಹೀಗಾಗಿ ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.
ಇಂದು ಕರ್ನಾಟಕ ಭವನದ ನೂತನ ಕಟ್ಟಡದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಕೇಂದ್ರ ಸಚಿವರ ಜೊತೆ ನೀರಾವರಿ ಯೋಜನೆಗಳ ಬಗ್ಗೆ, ಅರಣ್ಯ ಪ್ರದೇಶದ ಜಾಗ ಸ್ವಾಧೀನಕ್ಕೆ ಸಂಬಂಧಿಸಿದಂತೆ ಚರ್ಚೆ ಮಾಡಲಾಗಿದೆ. ಮಹದಾಯಿ ಯೋಜನೆಗೆ ಗೋವಾ ಸರ್ಕಾರ ತಕರಾರು ತೆಗೆದಿದೆ. ಗೋವ ಸರ್ಕಾರದ ತಕರಾರು ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಮೇಕೆದಾಟು ಯೋಜನೆ ಕೃಷ್ಣ ನದಿ ನೀರು ಯೋಜನೆ ಬಗ್ಗೆಯೂ ಚರ್ಚೆ ಮಾಡಿದ್ದೇವೆ. ರಾಝ್ಯದ ನೀರಾವರಿ ಯೋಜನೆಗಳ ಬಗ್ಗೆ ಕೇಂದ್ರ ಸಚಿವರ ಜೊತೆ ಚರ್ಚಿಸಿದ್ದೇವೆ ಎಂದರು.
ಕೇಂದ್ರ ಸಚಿವರು ಸಮಸ್ಯೆ ಇತ್ಯರ್ಥಪಡಿಸುವ ಭರವಸೆ ನೀಡಿದ್ದಾರೆ . ಎತ್ತಿನ ಹೊಳೆ ಯೋಜನೆಗೆ ಅನುದಾನ ನೀಡುವಂತೆ ಕೇಳಿದ್ದೇವೆ. ಯೋಜನೆಗಳಿಗೆ ನೀಡಬೇಕಿದ್ದ ಅನುದಾನಕ್ಕೆ ಮನವಿ ಮಾಡಿದ್ದೇವೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.
Key words: Goa, objection, Mahadayi project, Union Minister, DCM, DK Shivakumar