ಬೆಂಗಳೂರು,ಜುಲೈ,9,2025 (www.justkannada.in): ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ ನಡೆಸಿದ್ದು ಕಾನೂನಿನ ತೊಡಕು ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಕನ್ನಡ ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಸಚಿವ ಶಿವರಾಜ್ ತಂಗಡಗಿ, ತಮಿಳುನಾಡು ಮಹಾರಾಷ್ಟ್ರ ಮಾದರಿಯಲ್ಲಿ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ ನಡೆಸಿದ್ದು, ಕರಡು ಪ್ರತಿ ಸಿದ್ದಪಡಿಸಿದ ಬಳಿಕ ಸಿಎಂ ಜೊತೆ ಚರ್ಚೆ ನಡೆಸಲಾಗುತ್ತದೆ. ಕಾನೂನು ಇಲಾಖೆಯ ಜೊತೆ ಚರ್ಚೆ ನಡೆಸಲಾಗುತ್ತದೆ. ಈ ಬಗ್ಗೆ ಶೀಘ್ರವೇ ಅಧಿಕಾರಿಗಳ ತಂಡ ರಚನೆ ಮಾಡಿಲಾಗುತ್ತದೆ. ಮುಂದಿನ ಅಧಿವೇಶನದಲ್ಲಿ ಕರಡು ಮಂಡನೆಗೆ ಚಿಂತನೆ ನಡೆಸಲಾಗಿದೆ ಎಂದರು.
ದ್ವಿಭಾಷಾ ಸೂತ್ರ ವಿರೋಧಿಸಲು ಬಿಜೆಪಿಗೆ ನೈತಿಕತೆ ಇಲ್ಲ. ಬಲವಂತವಾಗಿ ಹಿಂದಿ ಹೇರಿಕೆ ಮಾಡಿದರೇ ನಾವು ವಿರೋಧ ಮಾಡುತ್ತೇವೆ. ಮಹರಾಷ್ಟ್ರ ಸರ್ಕಾರವೇ ದ್ವಿಭಾಷಾ ನೀತಿಯನ್ನ ಜಾರಿ ಮಾಡಿದೆ ಎಂದು ಸಚಿವ ಶಿವರಾಜ್ ತಂಗಡಗಿ ತಿಳಿಸಿದರು.
Key words: implementing, bilingual formula, Minister, Shivaraj Thangadgi