ನವದೆಹಲಿ,ಜುಲೈ,9,2025 (www.justkannada.in): ಮೈಸೂರು ದಸರಾದಲ್ಲಿ ಏರ್ ಶೋಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿ ಸಲ್ಲಿಸಿದ್ದೇವೆ. ಇದಕ್ಕೆ ಅವರು ಸಮ್ಮತಿ ಸೂಚಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಕೇಂದ್ರ ಸಚಿವ ರಾಜನಾಥ್ ಸಿಂಗ್ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕರ್ನಾಟಕದಲ್ಲಿ ಡಿಫೆನ್ಸ್ ಕಾರಿಡಾರ್ ಮಾಡಿ ಎಂದು ಮನವಿ ಮಾಡಲಾಗಿದೆ. ಉತ್ತರ ಪ್ರದೇಶ ತಮಿಳುನಾಡಿನಲ್ಲಿ ಡಿಫೆನ್ಸ್ ಕಾರಿಡಾರ್ ಇದೆ. ಅದೇ ರೀತಿ ಕರ್ನಾಟಕದಲ್ಲೂ ಡಿಫೆನ್ಸ್ ಕಾರಿಡಾರ್ ಮಾಡುವಂತೆ ಮನವಿ ಮಾಡಲಾಗಿದೆ. ವಿವಿಧ ಯೋಜನೆಗಳಿಗಾಗಿ ರಕ್ಷಣೆ ಇಲಾಖೆ ಭೂಮಿಗೆ ಮನವಿ ಸಲ್ಲಿಸಿದ್ದೇವೆ . ಏರ್ ಪೋರ್ಟ್ ರಸ್ತೆಯಲ್ಲಿ ಡಬಲ್ ಡೆಕರ್ ರಸ್ತೆಗೆ ಭೂಮಿ ರಕ್ಷಣ ಇಲಾಖೆಗೆ ಸೇರಿದ ಭೂಮಿ ನೀಡುವಂತೆ ಮನವಿ ಸಲ್ಲಿಸಲಾಗಿದೆ. ನಮ್ಮ ಮನವಿಗೆ ರಾಜನಾಥ್ ಸಿಂಗ್ ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.
ನಾಳೆ ಪ್ರಧಾನಿ ಮೋದಿ ಭೇಟಿಗೆ ಅವಕಾಶ ಕೇಳಲಾಗಿದೆ. ಅವಕಾಶ ನೀಡಿದರೆ ನಾಳೆ ಪ್ರಧಾನಿ ಮೋದಿ ಭೇಟಿಯಾಗುತ್ತೇವೆ. ಇನ್ನು ನಾಳೆ ರಾಹುಲ್ ಗಾಂಧಿ ಅವರ ಭೇಟಿಗೆ ಅವಕಾಶ ಕೇಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
Key words: CM Siddaramaiah, Meet, Central Minister, Rajanath singh